ಕಟಪಾಡಿ: ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ವತಿಯಿಂದ ರಜಾ ಮಜಾ -2024 ಮಕ್ಕಳ ಬೇಸಿಗೆ ಶಿಬಿರ

ಕಟಪಾಡಿ: ಎಸ್ ವಿ ಎಸ್ ವಿದ್ಯಾವರ್ಧಕ ಸಂಘ (ರಿ) ಕಟಪಾಡಿ ವತಿಯಿಂದ ರಜಾ ಮಜಾ -2024 ಮಕ್ಕಳ ಬೇಸಿಗೆ ಶಿಬಿರವು ಏಪ್ರಿಲ್ 8 ರಿಂದ ಏಪ್ರಿಲ್ 17 ರ ವರೆಗೆ 10 ದಿನಗಳ ಕಾಲ ಎಸ್ ವಿ ಎಸ್ ಆಂಗ್ಲ ಮಾದ್ಯಮ ಶಾಲಾ ವಠಾರದಲ್ಲಿ ಜರಗಲಿರುವುದು. 6 ರಿಂದ 16 ವರ್ಷದ ಮಕ್ಕಳು ಭಾಗವಹಿಸಲು ಅವಕಾಶವಿದ್ದು ಹೆಚ್ಚಿನ ಮಾಹಿತಿಗಾಗಿ 8088143006 ಈ ಸಂಖ್ಯೆಯನ್ನು ಸಂಪರ್ಕಿಸಬಹುದು. 10 ದಿನಗಳ ಈ ಶಿಬಿರದಲ್ಲಿ ಸುಮಾರು 20 ಕ್ಕೂ ಹೆಚ್ಚಿನ ಚಟುವಟಿಕೆಗಳನ್ನು […]

ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಗೆ ಇಂದು ವಯನಾಡಿನಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡಿನಲ್ಲಿ ರೋಡ್ ಶೋ ನಡೆಸಿದರು. ರಾಹುಲ್ ಸಹೋದರಿ ಪ್ರಿಯಾಂಕಾ ವಾಡ್ರಾ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ದೀಪಾ ದಾಸ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಭಾಗವಹಿಸಿದರು. ಸಿಪಿಐ ಈ ಕ್ಷೇತ್ರದಿಂದ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ ಮತ್ತು ಬಿಜೆಪಿ ತನ್ನ […]

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಅಭ್ಯರ್ಥಿ ಬ್ರಿಜೇಶ್ ಚೌಟ, ರಾಜ್ಯ ಚುನಾವಣಾ ಸಂಚಾಲಕ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕ ಯಶ್ ಪಾಲ್ ಸುವರ್ಣ,  ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಿಟಿ ರವಿ, ಜಾತ್ಯಾತೀತ ಜನತಾದಳದ ಮುಖಂಡ, ಶಾಸಕ ಭೋಜೇಗೌಡ ಉಪಸ್ಥಿತರಿದ್ದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮುಖಂಡರಾದ ಮೊಟಮ್ಮ, ಅಂಶುಮತ್ ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]