ಪಡುಬಿದ್ರಿ: ಜುಗಾರಿ ಅಡ್ಡೆಗೆ ದಾಳಿ

ಪಡುಬಿದ್ರಿ: ಗ್ರಾಮದ ಪೇಟೆಗೆರೆ ಬಬ್ಬು ಸ್ವಾಮಿ ದೇವಸ್ಥಾನದ ಖಾಲಿ ಜಾಗದಲ್ಲಿ ಕೋಳಿ ಅಂಕದ ಜೂಜಾಟವಾಡುತ್ತಿರುವ ಖಚಿತ ಮಾಹಿತಿ ಪಡೆದ ಪಿ ಎಸ್ ಐ ಪ್ರಸನ್ನ ಎಂ ಎಸ್ ಸ್ಥಳಕ್ಕೆ ದಾಳಿ ಮಾಡಿ ಒಂಬತ್ತು ಜನರನ್ನು ವಶಕ್ಕೆ ಪಡೆದು ನಗದು, ಚೂರಿ, ಕೋಳಿಗಳು ಹಾಗೂ. ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏ.3: ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ.

ಉಡುಪಿ: ಏ.3ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇಂದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ರವರು ದಿಕ್ಸೂಚಿ ಭಾಷಣ ಮಾಡಲಿರುವರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. […]

ಇಂದು ಕಾಂಗ್ರೆಸ್‌ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ.

ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರು ಏ.3ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಮಣಿಪಾಲ ರಜತಾದ್ರಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮೈಸೂರು ಡಿವಿಜನ್ ಉಸ್ತುವಾರಿಗಳು ರೋಝಿ ಜಾನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ, ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ […]

ತೈವಾನ್ ನಲ್ಲಿ 7.5 ತೀವ್ರತೆಯ ಭೂಕಂಪ: ಕರಾವಳಿ ತೀರಗಳಿಗೆ ಸುನಾಮಿ ಎಚ್ಚರಿಕೆ ನೀಡಿದ ಜಪಾನ್, ಫಿಲಿಪ್ಪೀನ್ಸ್

ಟೋಕಿಯೋ: ತೈವಾನ್ ಬಳಿ ಸಮುದ್ರದಲ್ಲಿ 7.5 ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು (Earthquake) ಸುನಾಮಿ (Tsunami) ಎಚ್ಚರಿಕೆಯನ್ನು ಪ್ರಚೋದಿಸಿದ ನಂತರ ಜಪಾನ್ (Japan) ದಕ್ಷಿಣ ಪ್ರಾಂತ್ಯದ ಓಕಿನಾವಾ ಕರಾವಳಿ ಪ್ರದೇಶದ ಜನರಿಗೆ ಸ್ಥಳಾಂತರಿಸುವ ಸಲಹೆಯನ್ನು ನೀಡಿದೆ. ಜಪಾನ್ ಹವಾಮಾನ ಸಂಸ್ಥೆ ಪ್ರಕಾರ, 3 ಮೀಟರ್ ವರೆಗಿನ ಸುನಾಮಿ ಅಲೆಗಳು ಜಪಾನ್‌ನ ನೈಋತ್ಯ ಕರಾವಳಿಯ ಹೆಚ್ಚಿನ ಪ್ರದೇಶಗಳನ್ನು ತಲುಪುವ ನಿರೀಕ್ಷೆಯಿದೆ. ಬುಧವಾರ ಬೆಳಿಗ್ಗಿನ ಜಾವ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಜಪಾನ್ […]