ಹೀಟ್‌ವೇವ್‌ನಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸಲಹೆ.

ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಬಿಸಿಲಿಗೆ ಕೊಡೆ/ಛತ್ರಿ ಬಳಸಿ: ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಬಳಸುವುದರೊಂದಿಗೆ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ಆದಷ್ಟು ಹೆಚ್ಚು ನೀರು ಸೇವಿಸಿ: ತೆಳುವಾದ […]

ಮತದಾನದ ದಿನದಂದು ವೇತನ ಸಹಿತ ರಜೆ

ಉಡುಪಿ: ಚುನಾವಣಾ ಆಯೋಗವು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಿಸಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು […]

ಸಹಕಾರ ಸಂಘಗಳಿಗೆ ಸರ್ಕಾರವು ಕಾಯ್ದೆ ಕಲಂ 30-ಬಿ ಯಡಿ ನೀಡಿದ ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯದ ತಡೆಯಾಜ್ಞೆ

ಉಡುಪಿ: ರಾಜ್ಯದ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಹಾಗೂ ವಿವಿದೋದ್ಧೇಶ ಸಹಕಾರ ಸಂಘಗಳು ಸ್ವೀಕರಿಸುವ ಠೇವಣಿಗಳ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ತನ್ನ ವಿವಿಧ ಅವಧಿಯ ಠೇವಣಿಗಳ ಮೇಲೆ ನಿಗದಿಪಡಿಸಿದ ಠೇವಣಿ ಬಡ್ಡಿ ದರದಕ್ಕಿಂತ ಶೇ. 2ಕ್ಕೂ ಮೀರಿದ ಬಡ್ಡಿ ದರಗಳನ್ನು ನೀಡಕೂಡದು, ಅಂತೆಯೇ ಈ ಸಹಕಾರ ಸಂಘಗಳು ವಿತರಿಸುವ ಯಾವುದೇ ಸಾಲಗಳಿಗೆ ಗರಿಷ್ಠ ಶೇ. 12 ಕ್ಕಿಂತ ಹೆಚ್ಚಿನ ಬಡ್ಡಿ ದರಗಳನ್ನು ನಿಗದಿಪಡಿಸುವಂತಿಲ್ಲ, ಸಹಕಾರ ಸಂಸ್ಥೆಗಳು ತಮ್ಮ ಹೆಚ್ಚುವರಿ ಠೇವಣಿಗಳನ್ನು ಕೇವಲ ಡಿ.ಸಿ.ಸಿ. ಬ್ಯಾಂಕ್ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಂದೀಪ್ ಗಾಣಿಗ ನೇಮಕ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಂದೀಪ್ ಗಾಣಿಗ ನೇಮಕಗೊಂಡಿದ್ದಾರೆ. CET, NEET, JEE ತರಬೇತುದಾರರಾಗಿರುವ ಸಂದೀಪ್ ಗಾಣಿಗ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ 10 ವರ್ಷಗಳಿಂದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತನ್ನ ವಿಶಿಷ್ಟ ಬೋಧನಾ ಶೈಲಿಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಛಾಪು ಮೂಡಿಸಿದ ಇವರು ಪ್ರಸ್ತುತ ವರ್ಷದಿಂದ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ. CET, JEE ತರಬೇತುದಾರ ಹಾಗೂ ಗಣಿತ ಶಾಸ್ತ್ರವನ್ನು ಸರಳ ತಂತ್ರ ಗಳ ಮೂಲಕ […]

ಹೆಬ್ರಿ: ಏ.10 ರಿಂದ ಚಾಣಕ್ಯ ನಲಿಕಲಿ-ಬೇಸಿಗೆ ರಜಾ ಶಿಬಿರ

ಹೆಬ್ರಿ : ವಿನೂತನ ತರಬೇತಿ ಹಾಗೂ ವೈವಿಧ್ಯಮಯ ಮನರಂಜನೆ ಮೂಲಕ ಉಡುಪಿ ಜಿಲ್ಲೆ ಮಾತ್ರವಲ್ಲದೆ ದೂರದ ವಿದ್ಯಾರ್ಥಿಗಳ ಮನಗೆದ್ದಿರುವ ವೈವಿಧ್ಯಮಯ ಬೇಸಿಗೆ ಶಿಬಿರ ಇದೀಗ ಮತ್ತೆ ಬಂದಿದೆ.ಹೆಬ್ರಿಯ ಚಾಣಕ್ಯ ಏಜ್ಯಕೇಶನ್ ಮತ್ತು ಕಲ್ಚರಲ್ ಆಕಾಡೆಮಿ ನೇತೃತ್ವದಲ್ಲಿ ಜೇಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿಯ ಗುರುಕೃಪಾ ಬಿಲ್ಡಿಂಗ್‌ನಲ್ಲಿರುವ ಚಾಣಕ್ಯ ಟ್ಯೂಟೋರಿಯಲ್ ಕಾಲೇಜಿನಲ್ಲಿ ಏ.10 ರಿಂದ ಏ.27ರವರೆಗೆ 9ನೇ ವರ್ಷದ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಿಗೆ ರಜಾ ಶಿಬಿರವನ್ನು ಆಯೋಜಿಸಿದೆ. ಬೆಳಿಗ್ಗೆ 9.30ರಿಂದ ಸಂಜೆ 4ರತನಕ ನಡೆಯುವ […]