ಎ.6 ರಿಂದ ಎ.18: ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ
ಹಿರಿಯಡಕ: ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿ ಭಜನೆಕಟ್ಟೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ ಪ್ರಯುಕ್ತ ಎ.6 ರಿಂದ ಎ.18ರ ವರೆಗೆ ಶ್ರೀರಾಮ ತಾರಕ ಮಂತ್ರ ಯಜ್ಞ 50 ಗಂಟೆಗಳ ಅಖಂಡ ಭಜನೆ, ಅನ್ನಾರಾಧನೆ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು:06-04-2024 ಶನಿವಾರದಿಂದರಾತ್ರಿ ಘಂಟೆ 7.30ರಿಂದ: ನಿತ್ಯ ಭಜನೆ ಹಾಗೂ ಅನ್ನಾರಾಧನೆ. 14-04-2024 ಆದಿತ್ಯವಾರಸಂಜೆ ಘಂಟೆ 4.00ಕ್ಕೆ ಹಿರಿಯಡ್ಕ ಮಹತೋಭಾರ ಶ್ರೀ ವೀರಭದ್ರ ದೇವಸ್ಥಾನದಿಂದ ಶ್ರೀ ರಾಮ ದೇವರ ಸನ್ನಿಧಿ ಕೊಂಡಾಡಿ ಭಜನೆಕಟ್ಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. 15-04-2024 […]
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ನೀರಿನ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಬಗ್ಗೆ ಅರಿವು ಕಾರ್ಯಕ್ರಮ ಜರಗಿತು. ನೀರಿಲ್ಲದೆ ಬದುಕಲು ಸಾಧ್ಯವಿಲ್ಲ ಈ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು. ಬ್ರಹ್ಮಾವರ ಕೃಷಿ ಕೇಂದ್ರದ ಸಹಪ್ರಾಧ್ಯಾಪಕ ಡಾ. ವಿನೋದ್ ಎ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ ಬಳಕೆ, ಜೊತೆಗೆ […]
ಎ. 9 ರಂದು ಕಾಪು ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
ಕಾಪು: ಭರದಿಂದ ಸಾಗುತ್ತಿರುವ ಕಾಪು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎ. 9ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಚಂಗಿ ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿ| ಕೆ.ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ […]
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 17.50 ಕೋ. ರೂ. ಲಾಭ: ಕಾರ್ಯಾಚರಣೆ ರಾಜ್ಯಾದ್ಯಂತ ವಿಸ್ತರಣೆ; ಶ್ರೀಘ್ರದಲ್ಲಿ ಯುಪಿಐ ಸೇವೆ ಲಭ್ಯ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2023-24ನೇ ಸಾಲಿನಲ್ಲಿ 921 ಕೋ. ರೂ. ವ್ಯವಹಾರ ನಡೆಸಿ 17.50 ಕೋ. ರೂ. ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ, ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟಿರುವ ಬ್ಯಾಂಕ್ ಅವಿಭಜಿತ ದ.ಕ. ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿದ್ದು 40 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2023-24ನೇ ಸಾಲಿನಲ್ಲಿ 532 ಕೋ. ರೂ. ಠೇವಣಿ, 389 ಕೋ. ರೂ. ಸಾಲ ಮತ್ತು […]
‘ಬಲಿಪೆ’ ತುಳು ಚಿತ್ರದ ಪೋಸ್ಟರ್ ಬಿಡುಗಡೆ: ಮೇ 24ರಂದು ತೆರೆಗೆ
ಮಂಗಳೂರು: ಎಂಡೊಸಲ್ಫಾನ್ ದುರಂತ ಮತ್ತು ತುಳುನಾಡಿನ ದೈವ–ದೇವರ ಕಥೆಯನ್ನು ಒಳಗೊಂಡ, ಗಾಯತ್ರಿ ಫಿಲ್ಮ್ ಮೇಕರ್ಸ್ ನಿರ್ಮಿಸಿರುವ ‘ಬಲಿಪೆ’ ತುಳು ಚಿತ್ರ ಮೇ 24ರಂದು ತೆರೆ ಕಾಣಲಿದೆ ಎಂದು ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ದೈವನರ್ತಕ ದಯಾನಂದ ಕತ್ತಲ್‌ಸಾರ್ ತಿಳಿಸಿದರು. ಅವರು ನಗರದ ಪ್ರೆಸ್ ಕ್ಲಬ್ ನಲ್ಲಿ ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ಬಲಿಪೆ ಎಂದರೆ ದೈವದ ವಾಹನ. ನೂರು ಹುಲಿಯ ಶಕ್ತಿ ಇರುವ ಹುಲಿ ಎಂದರ್ಥ. ಪೆರಾರ ಕ್ಷೇತ್ರ, ಕಾರಿಂಜ, ಬಜಪೆ ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ […]