ಉಡುಪಿ: ನೀತಿ ಸಂಹಿತೆ ಉಲ್ಲಂಘನೆ – ಮದ್ಯ ವಶ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ೦ತೆ ಏಪ್ರಿಲ್ 7 ರಂದು ಅಬಕಾರಿ ಇಲಾಖೆ ವತಿಯಿಂದ 1760 ರೂ. ಮೌಲ್ಯದ 3.960 ಲೀ ಮದ್ಯ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24,99,500 ರೂ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 16.85 ಕೋಟಿ ರೂ. ಲಾಭ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2023-24ನೇ ಸಾಲಿನಲ್ಲಿ 2378.78 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 16.85 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಉಡುಪಿ ಡಯಾನ ಹೋಟೆಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸಂಘವು 2023-24 ಆರ್ಥಿಕ ವರ್ಷಾಂತ್ಯಕ್ಕೆ 18,307 ಸದಸ್ಯರಿಂದ 4.77 ಕೋ. ರೂ ಪಾಲು ಬಂಡವಾಳ ಹೊಂದಿದೆ. ವರದಿ ವರ್ಷಾಂತ್ಯಕ್ಕೆ ಸಂಘವು […]

ವಸತಿ ವಿಜ್ಞಾನ ಕಾಲೇಜು ಪ್ರವೇಶಕ್ಕೆ: ಅರ್ಜಿ ಆಹ್ವಾನ

ಉಡುಪಿ, ಏಪ್ರಿಲ್ 08: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಎರಡು ಪದವಿ ಪೂರ್ವ ಕಾಲೇಜುಗಳಾದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು ಕಾರ್ಕಳ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಆರೂರು ಬ್ರಹ್ಮಾವರ ವಸತಿ ಕಾಲೇಜುಗಳ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ […]

ಸಂವಿಧಾನಿಕವಾಗಿ ಮತದಾನದ ಹಕ್ಕನ್ನು ಪ್ರತಿಯೊಬ್ಬರು ತಪ್ಪದೇ ಚಲಾಯಿಸಬೇಕು: ಡಾ.ಕೆ.ವಿದ್ಯಾಕುಮಾರಿ

ಉಡುಪಿ, ಏಪ್ರಿಲ್ 08: ಸಂವಿಧಾನಿಕವಾಗಿ ನೀಡಿರುವ ಅಮೂಲ್ಯವಾದ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ದೃಢಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಇಂದು ನಗರದ ಅಜ್ಜರಕಾಡಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚುನಾವಣಾ ಸಾಕ್ಷರತ ಸಂಘ, ರೆಡ್ ಕ್ರಾಸ್ […]