ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಭೂಮಿಕಾ ರಂಗ ಗೌರವ ಸಮರ್ಪಣೆ

ಉಡುಪಿ: ಬ್ರಹ್ಮಾವರದ ಎಸ್‌ಎಂಎಸ್ ಶಿಕ್ಷಣ ಸಂಸ್ಥೆಯ ಮಕ್ಕಳ ಮಂಟಪದಲ್ಲಿ ಮಂಗಳವಾರ ಸಾಂಸ್ಕೃತಿಕ ಸಂಘಟನೆ ಭೂಮಿಕಾ ಹಾರಾಡಿ ಸಂಸ್ಥೆಯ ಹತ್ತನೇ ವರ್ಷದ ನಾಟಕೋತ್ಸವ `ಬಣ್ಣ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗ ಗೌರವ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು, ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಸಮಾಜದ ಕರ್ತವ್ಯವಾಗಬೇಕು ಎಂದರು. ಈ ಮಣ್ಣಿನ ಜಾನಪದ ಕಲೆಗಳನ್ನು ಬೆಳೆಸುವ ಉದ್ದೇಶದಿಂದಲೇ ಹಿರಿಯ […]

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ.100 ಫಲಿತಾಂಶ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌ 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ […]

ಬ್ರಹ್ಮಾವರ: ಮಹಿಳೆ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಭಾನು (38) ಎಂಬ ಮಹಿಳೆಯು ಮಾರ್ಚ್ 10 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 122 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಎಳೆವೆಯಲ್ಲಿಯೇ ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು: ರವಿರಾಜ್ ಹೆಚ್ ಪಿ.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೂಮ್ ನಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು […]

ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸುಳ್ಳು ಹೇಳುವುದೇ ಅಭ್ಯಾಸವಾಗಿದೆ: ವೆರೋನಿಕಾ ಕರ್ನೇಲಿಯೋ

ಉಡುಪಿ: ಕರಾವಳಿ ಜಿಲ್ಲೆಗಳ ಬಿಪಿಎಲ್ ಕಾರ್ಡ್ ದಾರರಿಗೆ ಕುಚ್ಚಲಕ್ಕಿ ಪೊರೈಕೆ ಮಾಡುವ ವಿಚಾರದಲ್ಲಿ ಸ್ಪಷ್ಟನೆ ನೀಡುವ ಭರದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ ಪೂಜಾರಿ ಮತ್ತೊಂದು ಸುಳ್ಳು ಹೇಳುವುದರ ಮೂಲಕ ಸುಳ್ಳೇ ಇವರ ಮನೆ ದೇವರು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. 2021 ರ ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ಕರೆದು ನವೆಂಬರ್ ಹೊತ್ತಿಗೆ ಕೆಂಪು ಕುಚ್ಚಲಕ್ಕಿ ಪೂರೈಸಲು ಸರ್ಕಾರದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದು […]