ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿಗೆ ಶೇ.100 ಫಲಿತಾಂಶ: 23 ವಿದ್ಯಾರ್ಥಿಗಳು 590 ಅಂಕಗಳಿಗಿಂತ ಅಧಿಕ.

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಯಾಲ್‍ಬೈಲ್ ಹಾಗೂ ವಳಚ್ಚಿಲ್‍ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜುಗಳೆರಡೂ ಶೇ. 100 ಫಲಿತಾಂಶ ಪಡೆದಿದ್ದು, ಶೇ. 99.94ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಅಭೂತಪೂರ್ವ ಸಾಧನೆ ಮಾಡಿವೆ. ಒಟ್ಟು 1,560 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 590ಕ್ಕಿಂತ ಅಧಿಕ ಅಂಕಗಳನ್ನು 23 ವಿದ್ಯಾರ್ಥಿಗಳು, 580ಕ್ಕಿಂತ ಅಧಿಕ 193, ಶೇ. 95ಕ್ಕಿಂತ ಅಧಿಕ 400 ವಿದ್ಯಾರ್ಥಿಗಳು ಪಡೆದರೆ, ಶೇ.90ಕ್ಕಿಂತ ಅಧಿಕ […]

ತುಳುವರ ಹೊಸವರ್ಷ ‘ಬಿಸು’ ಹಬ್ಬದಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಈ ಕೆಳಗಿನಂತಿದೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 14 ರಂದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಈ ಹಿನ್ನಲೆ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ ಎಪ್ರಿಲ್ 14 ರಂದು ಈ ಕೆಳಗಿನ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಮಾಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ದಿನಾಂಕ 14-04-2024 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಣಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ […]

ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದವರನ್ನು ವಿರೋಧಿಸೋಣ: ವಿಜಯ್ ಕೊಡವೂರು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ಕಾರ್ಯಕರ್ತರ ಗೌರವಾರ್ಪಣೆ ಮತ್ತು ಕಾರ್ಯಕರ್ತರ ಸಮಾವೇಶ ಏ. 12 ರಂದು ಕೊಡವೂರಿನ ಲಕ್ಷ್ಮೀನಗರ ಪೇಟೆಯಲ್ಲಿ ನಡೆಯಿತು. ಮುಂಬರುವ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯದ ಪೀಳಿಗೆಯ ಚುನಾವಣೆ. ಈ ಚುನಾವಣೆಯನ್ನು ನಾವೇ ಎದುರು ನಿಂತು ಎದುರಿಸಬೇಕಾದಂತಹ ಅವಶ್ಯಕತೆ ಇದೆ. ಬಹು ಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಕಾಂಗ್ರೆಸ್ ಅನ್ನು ಧಿಕ್ಕರಿಸೋಣ ಬಹು ಸಂಖ್ಯಾತರ ರಾಮ ದೇವರನ್ನು ಕಾಲ್ಪನಿಕ ರಾಮ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕಾದರೆ ಅನೇಕ ಕಾರ್ಯಕರ್ತರ […]

ಮೇಷ ರಾಶಿಯಲ್ಲಿ ಸೂರ್ಯ ಸಂಚಾರ: ಮಿಥುನ ರಾಶಿಯವರ ಫಲಾಫಲಗಳು

ಮಿಥುನ ರಾಶಿಯವರಿಗೆ ಸೂರ್ಯನು ಮೂರನೇ ಮನೆಗೆ ಅಧಿಪತಿಯಾಗಿದ್ದಾನೆ. ವೃತ್ತಿಜೀವನದ ವಿಷಯದಲ್ಲಿ, ಸೂರ್ಯನ ಸಂಚಾರವು 11 ನೇ ಮನೆಯ ಲಾಭದ ಮೇಲೆ ಪ್ರಭಾವ ಬೀರಲಿದೆ. ಕೆಲಸದಲ್ಲಿರುವವರಿಗೆ ಸಂಬಳದಲ್ಲಿ ಹೆಚ್ಚಳ ಮತ್ತು ಮುಂಬಡ್ತಿಯ ಅವಕಾಶ. ಹಿರಿಯರೊಂದಿಗೆ ಬಲವಾದ ಬಾಂಧವ್ಯವನ್ನು ನಿರ್ಮಿಸುವ ಸಾಧ್ಯತೆಯಿದೆ ಅನೇಕ ಕಾರ್ಯಗಳನ್ನು ಸಮರ್ಥವಾಗಿ ಎದುರಿಸಬಹುದು.ಮತ್ತು ಈ ಸಮಯದಲ್ಲಿ ಆತ್ಮವಿಶ್ವಾಸವು ಅಧಿಕವಾಗಿರುತ್ತದೆ ಮತ್ತು ನಿಮ್ಮ ವೃತ್ತಿಪರ ಕ್ಷೇತ್ರದಲ್ಲಿ ಖ್ಯಾತಿಯು ಗಗನಕ್ಕೇರುತ್ತದೆ. ಹಣಕಾಸಿನ ವಿಷಯದಲ್ಲಿ ಗಮನಾರ್ಹವಾದ ಲಾಭಗಳನ್ನು ನೋಡಬಹುದು, ವಿಶೇಷವಾಗಿ ವ್ಯಾಪಾರ ಉದ್ಯಮಗಳ ಮೂಲಕ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದಾಯಕತೆ ಮತ್ತು […]

ಏ.18-19 ಸಿ.ಇ.ಟಿ ಪರೀಕ್ಷೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024 ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಗಳು ಜಿಲ್ಲೆಯಲ್ಲಿ ನಿಗದಿಪಡಿಸಿರುವ 17 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 18 ಮತ್ತು 19 ರಂದು ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಎಲ್ಲಾ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ […]