ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಭಾರತ ಸರ್ಕಾರದ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]

ಬೈಂದೂರು: ತಗ್ಗರ್ಸೆ ಗ್ರಾಮದ ಯುವಕ ನಾಪತ್ತೆ

ಬೈಂದೂರು : ತಗ್ಗರ್ಸೆ ಗ್ರಾಮದ ನಿರೋಡಿ ನಿವಾಸಿ ಉದಯ (29) ಎಂಬ ಯುವಕನುಏಪ್ರಿಲ್ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 10 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ನಂ:100 […]

ಶಿರೂರು ಮೂಲ ಮಠ ರಾಮನವಮಿ ಪ್ರಯುಕ್ತ ಛತ್ರಪತಿ ಶಿವಾಜಿ ನಾಟಕ ಪ್ರದರ್ಶನ

ಉಡುಪಿ: ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥರ ಉಪಸ್ಥಿತಿಯಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ ನಡೆಯಿತು.

ಇಂದಿನಿಂದ ಅಂಚೆ ಮತದಾನ ಪ್ರಾರಂಭ: ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆಯ ಅಂಚೆ ಮತದಾನ ಇಂದಿನಿಂದ ಆರಂಭವಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222 ವಿಶೇಷ […]

ಚುನಾವಣಾವಣಾಧಿಕಾರಿ ಹಾಗೂ ಸಿಬ್ಬಂದಿಗಳು ಮತದಾನಕ್ಕೆ ಅರ್ಜಿ ಸಲ್ಲಿಸಲು ಏ.13 ಕೊನೆಯ ದಿನ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ(Loksabha Elections) ಸಂಬಂಧಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರೆ ಅಧಿಕಾರಿಗಳು ಮತದಾನ ಮಾಡಲು ನಮೂನೆ- 12 ಹಾಗೂ ನಮೂನೆ -12 ಎ ಗಳನ್ನು ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನ. ನಿಗದಿತ ನಮೂನೆಯ ಅರ್ಜಿಗಳನ್ನು ಹಾಗೂ ಗುರುತಿನ ಚೀಟಿ ನಕಲು ಪ್ರತಿ, ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಸ್ಥಳೀಯ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ […]