ಹುಬ್ಬಳ್ಳಿ ಕಾಲೇಜಿನ ಆವರಣದಲ್ಲಿ ಕಾರ್ಪೋರೇಟರ್ ಪುತ್ರಿ ಕೊಲೆ ಪ್ರಕರಣ: ತಾರಕಕ್ಕೇರಿದ ಪ್ರತಿಭಟನೆ; ಆರೋಪಿ ಗಲ್ಲು ಶಿಕ್ಷೆಗೆ ಎಬಿವಿಪಿ ಒತ್ತಾಯ
ಮುನವಳ್ಳಿ (ಬೆಳಗಾವಿ ಜಿಲ್ಲೆ): ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಬಿಜೆಪಿ, ಕಾಂಗ್ರೆಸ್ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಿದರು. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸಹಪಾಠಿ ಫಯಾಜ್ (27) ಕಾಲೇಜು ಆವರಣದಲ್ಲೇ ಚಾಕು ಇರಿದು ಕೊಲೆ ಮಾಡಿದ್ದ. ಫಯಾಜ್ ಮುನವಳ್ಳಿ ಗ್ರಾಮದವನಾದ್ದರಿಂದ ಗ್ರಾಮದ ಜನ ಘಟನೆಯನ್ನು ತೀವ್ರವಾಗಿ ಖಂಡಿಸಿದರು. […]
ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ
ಗದಗ: ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ದಾಸರ ಓಣಿಯಲ್ಲಿ ನಿವಾಸದಲ್ಲಿ ಘಟನೆ ನಡೆದಿದ್ದು, ಮಲಗಿದ್ದಲ್ಲಿಯೇ ಕೊಲೆ ಮಾಡಲಾಗಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಮನೆಯ ಮೊದಲ ಮಹಡಿಯ […]
ಘರ್ ಘರ್ ಕೊಂಕಣಿ: 151 ನೇ ಕಾರ್ಯಕ್ರಮ
ಮಣಿಪಾಲ: ಕಾಸರಗೋಡು ಚಿನ್ನಾ ಅವರ ಪರಿಕಲ್ಪನೆಯ ‘ಘರ್ ಘರ್ ಕೊಂಕಣಿ’ ಎನ್ನುವ 151 ನೇ ಕಾರ್ಯಕ್ರಮವು ಪಳ್ಳಿ ರಸ್ತೆಯಲ್ಲಿರುವ ಸಾಯಿರಾಧಾ ಗ್ರೀನ್ ವ್ಯಾಲಿಯಖ್ಯಾತ ಸಾಹಿತಿ, ಕಾಡಬೆಟ್ಟು ಮನೋಹರ ನಾಯಕ್ ಮತ್ತು ಶೀಲಾ ನಾಯಕ್ ಇವರ ಆತಿಥ್ಯದಲ್ಲಿ ಏ.13 ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ‘ಘರ್ ಘರ್ ಕೊಂಕಣಿ’ ಇದರ ರೂವಾರಿ ಕಾಸರಗೋಡು ಚಿನ್ನಾ ಮಾತನಾಡಿ ಮಾತೃ ಭಾಷೆಯೇ ಅತ್ಯಂತ ಶ್ರೇಷ್ಟವಾದ ಭಾಷೆ. ಅದನ್ನು ಕಲಿಸಿದ ತಾಯಿಯೇ ಈ ಜಗತ್ತಿನ ಅತ್ಯಂತ ಶ್ರೇಷ್ಟ ದೇವರು. […]
ತಮಿಳಿನಾಡಿನಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭ: ಮತದಾನ ಮಾಡಿದ ಸ್ಟಾಲಿನ್, ಅಣ್ಣಾಮಲೈ, ರಜನಿಕಾಂತ್
ಚೆನ್ನೈ: ಏಳು ಹಂತದ ಲೋಕಸಭೆ ಚುನಾವಣೆಯ(Loksabha Elections) ಮೊದಲ ಹಂತದ ಮತದಾನದಲ್ಲಿ ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ. ತಮಿಳುನಾಡಿನಲ್ಲಿ ಪ್ರಮುಖ ಅಭ್ಯರ್ಥಿಗಳಾದ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಡಿಎಂಕೆ ನಾಯಕ ಗಣಪತಿ ಪಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಚೆನ್ನೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ತಮಿಳಿಸೈ ಸೌಂದರರಾಜನ್ ಅವರು ಡಿಎಂಕೆಯ ತಮಿಳಚಿ ತಂಗಪಾಂಡಿಯನ್ ಮತ್ತು ಎಐಎಡಿಎಂಕೆಯ ಜೆ ಜಯವರ್ಧನ್ ಅವರನ್ನು ಎದುರಿಸಲಿದ್ದಾರೆ. ತಮಿಳುನಾಡು […]
ಮೇಷರಾಶಿಯಲ್ಲಿ ಸೂರ್ಯ ಸಂಚಾರ: ಸಿಂಹ ರಾಶಿಯವರ ಫಲಾಫಲಗಳು
ಸಿಂಹ ರಾಶಿಯವರಿಗೆ, ಸೂರ್ಯನು ಮೊದಲ ಮನೆಯ ಅಧಿಪತಿಯಾಗಿದ್ದು ಅದು ನಡತೆ ಮತ್ತು ವ್ಯಕ್ತಿತ್ವಕ್ಕೆ ಸಂಬಂಧಿಸಿದೆ ಮತ್ತು ಇದು ಆಧ್ಯಾತ್ಮಿಕತೆ, ಧರ್ಮ ಮತ್ತು ಉನ್ನತ ಅಧ್ಯಯನಗಳ ಒಂಬತ್ತನೇ ಮನೆಯಲ್ಲಿ ಸಾಗುತ್ತದೆ. ವೃತ್ತಿಜೀವನದ ವಿಷಯದಲ್ಲಿ, ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ಅವರ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಮತ್ತು ಅದೃಷ್ಟದ ಅವಧಿಯಾಗಿದೆ. ಇದು ಬಡ್ತಿ, ಸಂಬಳ ಹೆಚ್ಚಳ ಮತ್ತು ಇತರ ವೃತ್ತಿ ಪ್ರಗತಿಗೆ ಅನುಕೂಲಕರವಾಗಿರುತ್ತದೆ. ಉನ್ನತ-ಪ್ರೊಫೈಲ್ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳುವ ಅಥವಾ ಹೆಚ್ಚುವರಿ ಪ್ರಯೋಜನಗಳೊಂದಿಗೆ ಬಡ್ತಿಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಸಿಂಹ ರಾಶಿಯ […]