ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮಾಜಿ ಸಚಿವೆ ಮೋಟಮ್ಮ

ಮೂಡಿಗೆರೆ: ದೇಶದ ಜನ ಎಚ್ಚೆತ್ತುಕೊಂಡಿದ್ದಾರೆ. ಬದಲಾವಣೆ ಬಯಸುತ್ತಿದ್ದಾರೆ. ಸಂಕಷ್ಟಗಳನ್ನು ಎದುರಿಸುತ್ತಿದ್ದ ಜನರಿಗೆ ಈಗ ಅರಿವಾಗಿದೆ. ಸುಳ್ಳು ಮಾರಾಟವಾಗವುದಿಲ್ಲ ಎಂಬುದು ಬಿಜೆಪಿಗೂ ಗೊತ್ತಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ಹೇಳಿದ್ದಾರೆ.ಮೂಡಿಗೆರೆಯಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿಯೇ ಈಗ ಗ್ಯಾರೆಂಟಿ ಯೋಜನೆಗಳನ್ನು ನಕಲು ಮಾಡುತ್ತಿದೆ. ಬಿಜೆಪಿಯ ಸುಳ್ಳಿನ ಸರಕುಗಳು ಈಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ. ಜನರು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ. ಯೋಚಿಸಲು ಆರಂಭಿಸಿದ್ದಾರೆ. […]

ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ನಲ್ಲಿ ಅಪರಂಜಿ ಬೇಸಿಗೆ ಶಿಬಿರ ಸಂಪನ್ನ.

ಬೈಂದೂರು: ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್( ಶುಭದಾ ಆಂಗ್ಲ ಮಾಧ್ಯಮ ಶಾಲೆ) ಆಯೋಜಿಸಿದ ಅಪರಂಜಿ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿ ಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಸಂಪನ್ನಗೊಂಡಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ […]

ಮಾಡಿದ ಕೆಲಸ ನೋಡಿ ಮತ ಕೊಡಿ: ಜಯಪ್ರಕಾಶ್‌ ಹೆಗ್ಡೆ…!!

ಉಡುಪಿ: ಜನಪ್ರತಿನಿಧಿಗಳಿಗೆ ಮತ ನೀಡುವಾಗ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಕೊಡಿ. ಕಳೆದ ನಾಲ್ಕು ದಶಕಗಳಿಂದ ಕರಾವಳಿಯ ಅಭಿವೃದ್ಧಿಗಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿರುವೆ. ಈಗ ಮತ್ತೊಮ್ಮೆ ನಿಮ್ಮಲ್ಲಿ ಮತ ಯಾಚಿಸುತ್ತಿರುವೆ. ಅಭಿವೃದ್ಧಿಗೆ ಬೆಂಬಲ ನೀಡುತ್ತೀರೆಂಬ ನಂಬಿಕೆ ನನಗಿದೆ. ಉಡುಪಿ ಪ್ರಜ್ಞಾವಂತ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆಂಬುದು ಸ್ಪಷ್ಟವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಕರ್ತವ್ಯ ನಿಭಾಯಿಸಲು ಮತ್ತೊಮ್ಮೆ ಅವಕಾಶ ನೀಡಿ ಎಂದು ನಿಮ್ಮಲ್ಲಿ ಮತ್ತೊಮ್ಮೆ ವಿನಂತಿಸಿಕೊಳ್ಳುತ್ತಿರುವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ […]

ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಬಿ ವೈ ರಾಘವೇಂದ್ರ ಅವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಂದೂರಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಾನಕ್ಕೆ ಕರೆಸುವ ಶಾಸಕ ಗುರುರಾಜ್ ಗಂಟಿಹೊಳೆ ಅವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರಿನಲ್ಲಿ ಯುವ ಮೋರ್ಚಾ ತಂಡದಿಂದ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಉಪಾಧ್ಯಕ್ಷರಾದ ರಾಘವೇಂದ್ರ ನೆಂಪ್, ಯುವ ಮೋರ್ಚ ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್ […]

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಸಾಮಾಜಿಕ ಕಾರ್ಯಕರ್ತ ದಿನಕರ್ ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಸಾಮಾಜಿಕ ಕಾರ್ಯಕರ್ತ ಇಂದು ದಿನಾಂಕ 19-04-2023 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ […]