ನೇಹಾ ಪೋಷಕರ ಆಗ್ರಹದಂತೆ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಗುರುವಾರ ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ದುಷ್ಕರ್ಮಿಯ ಕೃತ್ಯವನ್ನು ಖಂಡಿಸಿದ್ದಾರೆ. ಭವಿಷ್ಯದ ಕನಸುಗಳಿಗಾಗಿ ಬಾಳಿ ಬದುಕಬೇಕಾಗಿದ್ದ, ಶಿಕ್ಷಣಾಭ್ಯಾಸ ಮಾಡುತ್ತಿದ್ದ ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ. ಆಕೆಯನ್ನು ಅಮಾನುಷವಾಗಿ ಕೊಂದಿರುವ ವಿಕೃತ ಹಾಗೂ ಕ್ರೂರ ಮನಸ್ಥಿತಿಯ ಕೊಲೆಗಾರನ ಕೃತ್ಯವನ್ನು ಸುಸಂಸ್ಕೃತ ನಾಗರಿಕ ಸಮಾಜದ ಯಾರೂ ಒಪ್ಪುವುದಿಲ್ಲ. ಆತನ ಕೃತ್ಯಕ್ಕೆ ಕಾನೂನು ಕ್ರಮದಲ್ಲಿ ಕಠಿಣ ಶಿಕ್ಷೆಯಾಗಬೇಕು. […]

ಮಲ್ಪೆ: ಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿ ಸ್ನೇಹಿತರೊಂದಿಗೆ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಭಾನುವಾರ ಮಧ್ಯಾಹ್ನ ಸಮುದ್ರಕ್ಕಿಳಿದು ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಶ್ರೀನಾಗದೇವರ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶ ಸಂಪನ್ನ

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಸಮೀಪ ಸೀತಾ ನದಿಯ ತಟದಲ್ಲಿರುವ ಪಂಚಮೀಕಾನು ನಾಗಸನ್ನಿಯಲ್ಲಿ ಗುರುವಾರ ಶ್ರೀನಾಗದೇವರ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ನಾಗದೇವರಿಗೆ ಬ್ರಹ್ಮಕಲಾಭಿಷೇಕ, ಮಹಾಪೂಜೆ ಹಾಗೂ ನಾಗಪಾತ್ರಿ ವೈ. ಲಕ್ಷ್ಮೀನಾರಾಯಣ ಮಧ್ಯಸ್ಥ ಅವರಿಂದ ನಾಗದೇವರ ಸಂದರ್ಶನ ನಡೆಯಿತು. ನಂತರ ಪಲ್ಲಪೂಜೆ ಮತ್ತು ಮಹಾ ಅನ್ನಸಂತರ್ಪಣೆ ಜರಗಿತು. ಅರ್ಚಕರಾದ ಚಂದ್ರಶೇಖರ ಅಡಿಗ, ಕೃಷ್ಣ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]

ಮಾಧ್ಯಮ ಪ್ರಕಟಣೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ

ಉಡುಪಿ: ಲೋಕಸಭಾ ಚುನಾವಣೆ ಕುರಿತು ಮಾಧ್ಯಮದವರು ತಮ್ಮ ದೈನಂದಿನ ಸುದ್ದಿ, ಜಾಹೀರಾತು ಸೇರಿದಂತೆ ಮತ್ತಿತರ ವಿಷಯಗಳನ್ನು ತಮ್ಮ ಮಾಧ್ಯಮಗಳಲ್ಲಿ ಪ್ರಚಾರ ಪಡಿಸುವಾಗ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಧ್ಯಮದ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಕಿವಿಮಾತು ಹೇಳಿದರು. ಅವರು ಇಂದು ನಗರದ ಬ್ರಹ್ಮಗಿರಿಯ ವಾರ್ತಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಚುನಾವಣೆಯಲ್ಲಿ ಪತ್ರಕರ್ತರ ಪಾತ್ರ ಕುರಿತು […]