ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಮೂಡಿಗೆರೆ: ಸರ್ಕಾರದಿಂದ ಜಾರಿಗೆ ತಂದಿರುವ ಆರೋಗ್ಯ ವಿಮಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಮಾನ್ಯ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಸರಳೀಕರಣಗೊಳಿಸುವ ಕೆಲಸವಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹರಿಹರದ ಹಫ್ಳಿಯಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಅವರು ಮಾತನಾಡಿದರು. ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸರ್ಕಾರದ ನೆರವು ಪಡೆಯಬೇಕಾದಲ್ಲಿ, ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಪತ್ರ ಪಡೆದುಕೊಂಡು, ಖಾಸಗಿ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಹೆಚ್ಚಿನ ಸಂದರ್ಭದಲ್ಲಿ […]