ಮೋರ್ಗನ್ಸ್ ಗೇಟ್ ನಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಇಲ್ಲಿನ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ ಶೋ ನಡೆಸಿ, ಮತ ಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಉತ್ತಮ ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. ಎಐಸಿಸಿ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಸದಸ್ಯ ಟಿ.ಎಂ. ಶಹೀದ್, ಕಾರ್ಪೋರೇಟರ್ ನವೀನ್ […]
ಉಡುಪಿ: ಡಿಜಿಟಲ್ ಮಾರ್ಕೆಟಿಂಗ್ ಕಂಪನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ
ಉಡುಪಿ: ಇಲ್ಲಿನ ಪ್ರತಿಷ್ಠಿತ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ. ಕನಿಷ್ಟ 1 ವರ್ಷದ ಕೆಲಸದ ಅನುಭವ ಅಗತ್ಯಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಅನುಭವ ಇರುವವರಿಗೆ ಆದ್ಯತೆಆಕರ್ಷಕ ವೇತನದೊಂದಿಗೆ ಇತರ ಸೌಲಭ್ಯ ಸಂಪರ್ಕ: 9448379989
ಚಿನ್ನದ ಬ್ರಾಸ್ಲೆಟ್ ಕಾಣೆಯಾಗಿದೆ
ಏ.21 ರಂದು ಬೆಳಗ್ಗೆ 9 ರಿಂದ 10 ಗಂಟೆಯೊಳಗೆ ಕುಂಕುಮ ಹಾಲ್ ಮತ್ತು ಆಶ್ರಯ ಹೊಟೇಲ್ ಸಮೀಪದ ರಸ್ತೆಯಲ್ಲಿ ಚಿನ್ನದ ಬ್ರಾಸ್ಲೆಟ್ ಬಿದ್ದು ಕಾಣೆಯಾಗಿದ್ದು, ಸಿಕ್ಕಿದವರು ಶಶಿಕಾಂತ್ ಬೆಂಗಳೂರು ಅವರನ್ನು ದೂ.ಸಂಖ್ಯೆ: 9845403570 ಸಂಪರ್ಕಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಏಪ್ರಿಲ್ 26 ರಂದುಚುನಾವಣೆ ನಡೆಯಲಿದ್ದು, ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಸ್ಗಳು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಏಪ್ರಿಲ್ 24 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]
ಏ.23: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾರ್ವಜನಿಕ ಸಭೆ
ಬ್ರಹ್ಮಾವರ: ಏ. 23 ರಂದು ಸಂಜೆ 5.30 ಕ್ಕೆ ಬಹ್ಮಾವರ ಬಂಟರ ಭವನದ ಎದುರುಗಡೆ ಬಸ್ ನಿಲ್ದಾಣದ ಬಳಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.