ರಮಾಕಾಂತ ಪುರಾಣಿಕರಿಗೆ ಪಿಎಚ್ ಡಿ ಪದವಿ
ರಮಾಕಾಂತ ಪುರಾಣಿಕ್ ಹೆಚ್. ಇವರು ಮಂಡಿಸಿದ ‘Studies on the physical and NLO properties of Halogen substituted novel Chalcones’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಘಟಿಕೋತ್ಸವದಲ್ಲಿ ಪಿಎಚ್ ಡಿ ಪದವಿಯನ್ನು (ಡಾಕ್ಟರೇಟ್) ಪ್ರಧಾನ ಮಾಡಲಾಯಿತು. ರಮಾಕಾಂತ ಪುರಾಣಿಕರು ಎಂಎಸ್ಸಿ, ಎಂಟೆಕ್, ಎಂಫಿಲ್ ಪದವೀಧರರಾಗಿದ್ದು, ಡಾ ರವೀಂದ್ರ ಹೆಚ್ .ಜೆ (ಭೌತಶಾಸ್ತ್ರಮುಖ್ಯಸ್ಥರು, SMVITM ಬಂಟಕಲ್) ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಪ್ರಸ್ತುತ ಇವರು ಮಂಗಳೂರಿನ ರಥಬೀದಿಯಲ್ಲಿರುವ ಸರ್ಕಾರಿ ಪ್ರಥಮ […]
ಚಾಮರಾಜನಗರ: ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ […]
ಎಸ್‌ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಿಟ್ಟಿರುವ 11 ಸಾವಿರ ಕೋಟಿ ಹಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಭಾಗೀರಥಿ ಮುರುಳ್ಯ
ಬೈಂದೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮನೆ, ಸಮುದಾಯ ಭವನ, ರಸ್ತೆ, ಚರಂಡಿ ನಿರ್ಮಿಸಲು ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗೆ ಬಳಸಿ ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಕಿರಿಮಂಜೇಶ್ವರದಲ್ಲಿ ಭಾನುವಾರ ನಡೆದ ಬೈಂದೂರು ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾದ ಸಮಾವೇಶದಲ್ಲಿ ಮಾತನಾಡಿದ ಅವರು, ಎಸ್‌ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಿಟ್ಟಿರುವ 11 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ:
ಕುಂದಾಪುರ: 2024-2025 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಶೈಕ್ಷಣಿಕ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ಶಿಕ್ಷಕರ ಪ್ರಯತ್ನದ ಜೊತೆಗೆ ಹೆತ್ತವರ ಬೆಂಬಲ ಅತ್ಯಗತ್ಯ ಎಂದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ […]