ಪ್ರೆಸ್ಟೀಜ್ ಎನಿಥಿಂಗ್ ಫಾರ್ ಎನಿಥಿಂಗ್: ಮೇ 3 ರಿಂದ 5 ರವರೆಗೆ ಸೇಲ್ಸ್ ಎಂಡ್ ಎಕ್ಸ್ ಚೇಂಜ್ ಮೇಳ
ಮಣಿಪಾಲ: ಇಲ್ಲಿನ ಆರ್.ಎಸ್.ಬಿ ಭವನದಲ್ಲಿ ಪ್ರೆಸ್ಟೀಜ್ ಎನಿಥಿಂಗ್ ಫಾರ್ ಎನಿಥಿಂಗ್ ಸೇಲ್ಸ್ ಎಂಡ್ ಎಕ್ಸ್ ಚೇಂಜ್ ಮೇಳ ಮೇ.3 ರಿಂದ 5 ರವರೆಗೆ ನಡೆಯಲಿದ್ದು, ಯಾವುದನ್ನಾದರೂ ಯಾವುದೇ ಅಡುಗೆ ಪರಿಕರಿಗಳಿಗಾಗಿ ಬದಲಾಯಿಸುವ ಸುವರ್ಣಾವಕಾಶ. ಕುಕ್ಕರ್, ತವಾ, ಕಡಾಯಿಗಳ ಮತ್ತಿತರ ವಸ್ತುಗಳ ಮೇಲೆ 24%-65% ದರ ಕಡಿತ ಹಳೆಯ ಯಾವುದೇ ಕುಕ್ಕರ್, ಗ್ಯಾಸ್ ಸ್ಟವ್, ಮಿಕ್ಸರ್, ಅನ್ನು ಹೊಸ ಪ್ರೆಸ್ಟೀಜ್ ಪರಿಕರಗಳೊಂದಿಗೆ ಬದಲಾಯಿಸಿ ಹೆಚ್ಚಿನ ಡಿಸ್ಕೌಂಟ್ ಪಡೆಯಿರಿ. ಪ್ರೆಸ್ಟೀಜ್ ಕುಕ್ಕರ್ ಗಳ ಮೇಲೆ ಬಿಡಿ ಭಾಗಗಳ ಸರ್ವಿಸ್ ಲಭ್ಯ […]
ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ರಾಹುಲ್ ಗಾಂಧಿ: ಕಾಂಗ್ರೆಸ್ ನಿಂದ ಮಹತ್ವದ ಘೋಷಣೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಬಹು ದೊಡ್ಡ ನಿರ್ಧಾರದಲ್ಲಿ ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಪಕ್ಷವು ಘೋಷಿಸಿದೆ. ಕಳೆದು ಕೆಲವು ದಿನಗಳಿಂದ ರಾಹುಲ್ ಗಾಂಧಿ ಅಮೇಥಿಯಿಂದ ಮರಳಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ರಾಹುಲ್ ಗಾಂಧಿಯು ಕೇರಳದ ವಯನಾಡ್ ಮತ್ತು ಅಮೇಥಿ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನುವಂತಹ ಮಾತುಗಳನ್ನು ತೇಲಿ ಬಿಡಲಾಗಿತ್ತು. ಆದರೆ ಇದೀಗ ರಾಹುಲ್ ಗಾಂಧಿ ತಮ್ಮ ತಾಯಿಯಿಂದ ತೆರವಾದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಸೋನಿಯಾಗಾಂಧಿ ರಾಜ್ಯಸಭೆ ಪ್ರವೇಶಿಸಿದ್ದು ಈ […]
ಯುವ ಶಕ್ತಿಯ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್ ಪಾತ್ರ ಬಹು ಮುಖ್ಯ: ಬಸ್ರೂರು ರಾಜೀವ್ ಶೆಟ್ಟಿ
ಉಡುಪಿ: ರಾಷ್ಟ್ರೀಯ ಸೇವಾ ಯೋಜನೆಯು ಯುವ ಶಕ್ತಿಯ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಇವರ ಆಶ್ರಯದಲ್ಲಿ ನಡೆಯುತ್ತಿರುವ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ […]
ಕಟ್ಟಡ ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಬಿಸಿಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸೂಚನೆ
ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನೆಲೆ, ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷಿಯಿಂದ ಜಿಲ್ಲೆಯ ಎಲ್ಲಾ […]
ಬಿಸಿಗಾಳಿ ಹಾಗೂ ಡೆಂಗ್ಯೂ ಜ್ವರದಿಂದ ರಕ್ಷಿಸಿಕೊಳ್ಳಲು ಸಲಹೆ ಸೂಚನೆಗಳು
ಉಡುಪಿ: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ಸಹಾ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ಓ.ಆರ್.ಎಸ್), ಎಳನೀರು ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಶರಬತ್ತು, ಹಣ್ಣಿನ ರಸಗಳು, ಮಜ್ಜಿಗೆ/ಲಸ್ಸಿಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ಸೇವಿಸಬೇಕು ಮತ್ತು ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸೂಕ್ತ. […]