ಕಾಪು: ಪಿಲಿ ಕೋಲ ಸಂಪನ್ನ

ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು. 2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಪಿಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ. ಈ ಬಾರಿಯ ನಗರ ಪ್ರದಕ್ಷಿಣೆ ಮತ್ತು […]

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ.

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ […]

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌ಡಿ ರೇವಣ್ಣ ಬಂಧನ; ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಬೆಂಗಳೂರು: ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ಸಮಿತಿ (ಎಸ್‌ಐಟಿ) ಕರ್ನಾಟಕ ಲೈಂಗಿಕ ಹಗರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಶನಿವಾರ ಬಂಧಿಸಿದೆ. ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರು ನ್ಯಾಯಾಲಯ ತಿರಸ್ಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ತಂದೆ ಮತ್ತು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ರೇವಣ್ಣ ಅವರನ್ನು ಬಂಧಿಸಿ ಸಿಐಡಿ ಕಚೇರಿಗೆ […]

ಜಿಲ್ಲಾಧಿಕಾರಿಗಳಿಂದ ಸಂತೆಕಟ್ಟೆ ರಾ.ಹೆ ಕಾಮಗಾರಿಗಳ ಪರಿಶೀಲನೆ

ಉಡುಪಿ: ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ ರಾ.ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಂದರ್ಭ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಪರಿಶೀಲಿಸಿದರು.

ರಾ.ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ ಶೀಘ್ರ ಪೂರ್ತಿಗೊಳಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು

ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಸಂತೆಕಟ್ಟೆಯ ಕಾಮಗಾರಿ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 66 ರ ಸಂತೆಕಟ್ಟೆ ಅಂಡರ್‌ಪಾಸ್ […]