ಮಂಗನ ಕಾಯಿಲೆ: ಐದು ವರ್ಷದ ಬಾಲಕಿ ಸಾವು; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ
ಉಡುಪಿ: ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಅಥವಾ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಸಂಜೆ ಬಾಲಕಿ ಸಾವಿನೊಂದಿಗೆ ವೈರಸ್ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ, ಸಿದ್ದಾಪುರ ತಾಲೂಕಿನಲ್ಲಿ ಎಂಟು ಸಾವುಗಳು ದಾಖಲಾಗಿವೆ ಎಂದು ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ನೀರಜ್ ಬಿ.ವಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 99 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಿದ್ದಾಪುರ […]
ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ 6 ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ತಹಶೀಲ್ದಾರ್‌ಗೆ ಮನವಿ
ಕಾರ್ಕಳ: ತಾಲ್ಲೂಕಿನ ಬೈಲೂರು ಉಮಿಕ್ಕಳ ಬೆಟ್ಟದ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ ಎಂದು 6 ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಎರ್ಲಪಾಡಿ, ನೀರೆ, ಬೈಲೂರು, ಪಳ್ಳಿ, ಕುಕ್ಕುಂದೂರು, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ತಹಶೀಲ್ದಾರ್ ಡಾ.ಪ್ರತಿಭಾ ಆರ್. ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಪ್ರವಾಸೋದ್ಯಮ ದೃಷ್ಟಿಯಲ್ಲಿ ಅತಿ ಮಹತ್ವದ್ದೆನಿಸಿದೆ. ಹೀಗಾಗಿ ಬಾಕಿಯಿರುವ ಕಾಮಗಾರಿ ಆರಂಭಿಸಿ ಶೀಘ್ರ […]
ವಿಶ್ವ ಪರಿಸರ ದಿನಾಚರಣೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸAಸ್ಥೆಯಾಗಿದ್ದು, ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.ಕನ್ನಡ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ 1000 ಪದಗಳಿಗೆ ಮೀರದಂತೆ ಪ್ರಬಂದವನ್ನು ಬರೆದು, ಮೇ 27 ರ ಒಳಗಾಗಿ ಇ-ಮೇಲ್‌ನಲ್ಲಿ ಪಿಡಿಎಫ್ ಮೂಲಕ [email protected] ಗೆ ಅಥವಾ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, […]
ಮೇ 8: ಲೋಕಾಯುಕ್ತ ಜನ ಸಂಪರ್ಕ ಸಭೆ
ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: […]
ಕಾರ್ಕಳ ಶ್ರೀ ವೆಂಕಟರಮಣ ದೇವಳ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ […]