ಜಿ.ಎಸ್.ಬಿ ಮಹಿಳಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆಶಾ ಶೆಣೈ ಆಯ್ಕೆ

ಉಡುಪಿ: ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಇಲ್ಲಿನ ಜಿ.ಎಸ್.ಬಿ ಮಹಿಳಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆಶಾ ಶೆಣೈ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಲತಾ, ಕಾರ್ಯದರ್ಶಿಯಾಗಿ ಗೀತಾ, ಖಜಾಂಚಿಯಾಗಿ ಶೈಲಜಾ ಪೈ ಹಾಗೂ ಇತರ ಪಧಾಧಿಕಾರಿಗಳ ಆಯ್ಕೆ ಭುವನೇಂದ್ರ ಮಂಟಪದಲ್ಲಿ ಜರುಗಿತು. ಮಂಡಳಿಯ ಮಾಜಿ ಅಧ್ಯಕ್ಷೆ ಸುಧಾ ಶೆಣೈ ಹಾಗೂ ಗೌರವಾಧ್ಯಕ್ಷೆ ಪ್ರಭಾ ಶೆಣೈ , ಮಹಿಳಾ ಮಂಡಳಿಯ ಸದಸ್ಯೆಯರು ಉಪಸ್ಥಿತರಿದ್ದರು.

ಕೋಟ: ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

ಕೋಟ: ಡೈರಿ ಫಾರ್ಮ್ ನಲ್ಲಿ ಹುಲ್ಲು ಕಟಾವು ನಡೆಸುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿ ಸೋಮವಾರ ಸಂಭವಿಸಿದೆ. ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ್ ದಾಳಿಗೊಳಗಾದವರು. ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್‌ ಕುಮಾರ್‌ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದರು. ಆಗ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ […]

ಮೂರನೇ ಹಂತದ ಮತದಾನ: ಗಾಂಧಿನಗರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆಯ 3 ನೇ ಹಂತದ ಮತದಾನ ಮಂಗಳವಾರ ಆರಂಭವಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಅಹಮದಾಬಾದ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಇಂದು ಮೂರನೇ ಹಂತದ ಮತದಾನ. ನಮ್ಮ ದೇಶದಲ್ಲಿ ‘ದಾನ’ಕ್ಕೆ ಹೆಚ್ಚಿನ ಮಹತ್ವವಿದ್ದು, ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಇನ್ನೂ 4 ಸುತ್ತಿನ ಮತದಾನ ಬಾಕಿ ಇದೆ” ಎಂದರು. ಗುಜರಾತಿನ ಮತದಾರನಾಗಿ ನಾನು ನಿಯಮಿತವಾಗಿ ಮತ ಚಲಾಯಿಸುವ ಏಕೈಕ […]

ಮಂಗಳೂರು: ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ, ಸಂಘಟಕ, ಮತ್ತು ಕೆಡಬ್ಲ್ಯುಎಎ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಮೇ 6ರ ಮುಂಜಾನೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂದ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ಅವರು ’ಶಿಕೇರಾಮ್ ಸುರತ್ಕಲ್’ ಕವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ| ಟಿ.ಎಮ್.ಎ. ಪೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ […]