ಮಣಿಪಾಲ MSDC ಯಲ್ಲಿ ಇಂಟರ್ ನೆಟ್ ತಂತ್ರ್ಯಜ್ಞಾನ ಕುರಿತು ಅತ್ಯುತ್ತಮ ಶಿಕ್ಷಣ.

ಮಣಿಪಾಲ: ಮಣಿಪಾಲದ MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ವಾಗಿದ್ದು ಆಸಕ್ತರಿಂದ ಅಲ್ಪಾವಧಿಯ (ಒಂದು ತಿಂಗಳು) ಕೋರ್ಸ್ ಗಳನ್ನು ಆಹ್ವಾನಿಸಿದೆ. ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಇಲ್ಲಿ ನೀಡಲಾಗುತ್ತಿದೆ. ಇಂಟರ್ ನೆಟ್ ನ ಟೆಕ್ನಿಕ್ ಕುರಿತು, ತಂತ್ರಜ್ಞಾನದ ಕುರಿತು ಮಾಹಿತಿ ಇಲ್ಲಿ ನೀಡಲಾಗುತ್ತದೆ. ಅದ್ಬುತ ಅವಕಾಶವಿರುವ ಕ್ಷೇತ್ರ ಇದಾಗಿದೆ. Embedded Systems and loT: 🔹IoT Architecture and life cycle 🔹 Platforms for IoT 🔹 Real time […]

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮೇ 08: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೆಲಿಕಾಪ್ಟರ್-ಎಂ.ಆರ್.ಓ ವಿಭಾಗದ ಸ್ಕೇಲ್ ಡಿ-6 ಹುದ್ದೆ ಹಾಗೂ ದೇಶದ ವಿವಿಧ ಸ್ಥಳಗಳಲ್ಲಿ ಕೆಲಸ ನಿರ್ವಹಿಸಲು ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 1 2024 ರಂದು ಅಥವಾ ಅದಕ್ಕೂ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 11 ರ ಒಳಗೆ ವೆಬ್‌ಸೈಟ್ www.hal-india.co.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ […]

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ನಿಧನ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಅವರು ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ವಸಂತ ಬಂಗೇರಾ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ […]

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ ಹಾಗೂ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ

ಮಣಿಪಾಲ, ಮೇ.8: ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆಯಾಗಿದೆ. ಈ ಅಸ್ವಸ್ಥತೆಯಲ್ಲಿ ರೋಗಿಯು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆದ್ದರಿಂದ, ಈ ಖಾಯಿಲೆ ಇರುವವರು ರಕ್ತ ಹೀನತೆಯಿಂದ ಬಳಳುತ್ತಾರೆ ಮತ್ತು ಜೀವನಪರ್ಯಂತ ನಿಯಮಿತ ರಕ್ತ ವರ್ಗಾವಣೆಯ ಮೇಲೆ ಅವಲಂಬಿತರಾಗಿರುತ್ತಾರೆ. ಥಲಸ್ಸೆಮಿಯಾ ರೋಗವನ್ನು ತಡೆಗಟ್ಟುವಿಕೆ, ಗುಣಪಡಿಸುವ ಆಯ್ಕೆಗಳು ಮತ್ತು ಥಲಸ್ಸೆಮಿಯಾ ರೋಗಿಗಳ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನವನ್ನು ಪ್ರತಿವರುಷ ಮೇ 8 ರಂದು ಆಚರಿಸಲಾಗುತ್ತದೆ. ಈ ವರುಷ ಥಲಸ್ಸೆಮಿಯಾ ದಿನದ […]

ಕೊಡವೂರು: ವಿಕಲಚೇತನರಿಗೆ ಮತ್ತು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

ಕೊಡವೂರು: ದಿವ್ಯಾಂಗ ರಕ್ಷಣಾ ಸಮಿತಿ, ಉಡುಪಿ ಜಿಲ್ಲೆ ಮತ್ತು ರೋಟರಿ ಕ್ಲಬ್, ಕಲ್ಯಾಣಪುರ ವತಿಯಿಂದ ಕೊಡವೂರು ವಾರ್ಡಿನ ಆಯ್ದ ವಿಕಲಚೇತನರಿಗೆ ಮತ್ತು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮವು ಏ. 04 ರಂದು ವಿಪ್ರ ಶ್ರೀ ಸಭಾಭವನ ಕೊಡವೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕ ಕೆ .ವಿಜಯ ಕೊಡವೂರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ದಿವ್ಯಾಂಗರನ್ನು ಗುರುತಿಸಿ, ಅವರ ಸಮಿತಿಯನ್ನು ರಚನೆ ಮಾಡಿ ಪ್ರತೀ ತಿಂಗಳು ದಾನಿಗಳ ನೆರವಿನಿಂದ ದುಡಿಯಲು ಸಾಧ್ಯವಿಲ್ಲದ ದಿವ್ಯಾಂಗರಿಗೆ […]