ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರಾ ಜಯರಾಂ ನಿಧನ

ಬೆಂಗಳೂರು: ಕಿರುತೆರೆ ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು.ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.ತೆಲುಗಿನ ತ್ರಿನಯನಿ ಮೂಲಕ ತೆಲುಗರ ಮನೆಮಾತಾಗಿದ್ದ ಪವಿತ್ರ ಇಂದು ಮುಂಜಾನೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದ […]

ವಿಧಾನ ಪರಿಷತ್ ಚುನಾವಣೆ: ಬಿಜೆಪಿ 5 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ.

ಬೆಂಗಳೂರು: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ 6 ಸ್ಥಾನಗಳ ಚುನಾವಣೆಗೆ ಬಿಜೆಪಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ವಿಧಾನಪರಿಷತ್‌ ಮಾಜಿ ಸದಸ್ಯ ಅಮರನಾಥ್‌ ಪಾಟೀಲ್‌. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮುಖಂಡ ಇ.ಸಿ.ನಿಂಗರಾಜಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ ಹಾಗೂ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರ ಹೆಸರನ್ನು […]

ಮಣಿಪಾಲ ಡಾ.ಟಿಎಂಎ ಪೈ ಪಾಲಿಟೆಕ್ನಿಕ್‌’ನಲ್ಲಿ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭ.

ಮಣಿಪಾಲ: ಮಣಿಪಾಲ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ಸಂಸ್ಥೆಯು ಸಕಲ ಸೌಲಭ್ಯವನ್ನು ಹೊಂದಿದೆ. 39 ವರ್ಷಗಳಿಂದ ತಾಂತ್ರಿಕ ವ್ಯಾಸಂಗ ನೀಡುತ್ತಿರುವ ಈ ಸಂಸ್ಥೆಯಲ್ಲಿ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಸವಲತ್ತುಗಳಲ್ಲಿ ಸಂಸ್ಥೆ ರಾಜ್ಯದಲ್ಲಿಯೇ ಪ್ರಥಮ: ಸುಸಜ್ಜಿತ ಪ್ರಯೋಗಾಲಯಗಳು, ಗ್ರಂಥಾಲಯ, ಗಾಳಿ ಬೆಳಕಿರುವ ವಿಶಾಲ ತರಗತಿ ಕೊಠಡಿಗಳು, ಬೋಧನೆ ಮತ್ತು ಸವಲತ್ತುಗಳಲ್ಲಿ ಈ ಸಂಸ್ಥೆ ರಾಜ್ಯದಲ್ಲಿಯೇ ಪ್ರಥಮವೆನಿಸಿ ಕೊಂಡಿದೆ. ಈ ಸಂಸ್ಥೆಯು ಪ್ರತಿಷ್ಠಿತ ಡಾ.ಟಿಎಂಎ ಪೈ ಪ್ರತಿಷ್ಠಾನದ ಆಡಳಿತಕ್ಕೆ ಒಳಪಟ್ಟಿದೆ. ಮೂರು ವರ್ಷ ಅವಧಿಯ ತಾಂತ್ರಿಕ ಶಿಕ್ಷಣ: ಆಟೋಮೊಬೈಲ್ […]

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ.

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ಮೇ.10 ನೆರವೆರಿತು. ನೂತನ ಸುಸಜ್ಜಿತ ಆಡಳಿತ ಕಛೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉಧ್ಘಾಟಿಸಿದರು. ಅವರ್ ಲೇಡಿ ಅಫ್ ಮಿರಾಕಲ್ಸ್ ಮಿಲಾಗ್ರಿಸ್ ಚರ್ಚ್‍ನ ಧರ್ಮಗುರು ವಂ. ಬೊನವೆಂಚರ್ ನಜರೆತ್ ನೂತನ ಕಛೇರಿಯನ್ನು ಆಶಿರ್ವಚಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಅವರ್ ಲೇಡಿ ಅಫ್ […]