ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕರ ಸಭೆ.
ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಇದರ ಪ್ರಥಮ ವರ್ಷದ ವಿದ್ಯಾರ್ಥಿಗಳ 2023-24ನೇ ಸಾಲಿನ ಶಿಕ್ಷಕ-ರಕ್ಷಕರ ಎರಡನೇಯ ಸಭೆಯು ದಿನಾಂಕ 11 ಮೇ 2024 ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು. ಇಂಜಿನಿಯರಿಂಗ್ ಕೋರ್ಸ್‍ನ ಬಗ್ಗೆ ಅರಿವು ಮೂಡಿಸುವುದು, ಸಂಸ್ಥೆಯ ನಿಯಮಗಳು ಮತ್ತು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾಲೇಜಿನ […]
ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ: ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್
ಮುಂದಿನ 4 ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಸಂಭವಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಪ್ರತೀ ಗಂಟೆಗೆ ಗಾಳಿಯು 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, […]
ಕಾರ್ಕಳ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಅಹ್ವಾನ
ಗಣಿತನಗರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಸ್ಥಳೀಯ ಬಡ ಅರ್ಹ ಮಕ್ಕಳಿಗೆ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಿಂದ ಈ ಉಚಿತ ಶಿಕ್ಷಣವನ್ನು ಕಾಲೇಜು ವಿಭಾಗದಲ್ಲಿ ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಲಾಗಿದೆ. ಪ್ರಸ್ತುತ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ […]
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರ ಸಾಧನೆ.
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 128 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ. ಅವರಲ್ಲಿ 68 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 47 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯ ಅಂಕವನ್ನು ಗಳಿಸಿರುತ್ತಾರೆ 27 ಜನ A+ ಗ್ರೇಡನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. 9 ವಿದ್ಯಾರ್ಥಿನಿಯರು 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಎಲ್ಲ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಸಲ್ಲಿಸಿರುತ್ತಾರೆ.
ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಇಂದು ಶ್ರೀಮನ್ಮಹಾರಥೋತ್ಸವ
ಬ್ರಹ್ಮಾವರ: ತಾಲೂಕಿನ ಬ್ರಹ್ಮಾವರ ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಮೇ.12 ಆದಿತ್ಯವಾರ ನಿತ್ಯಬಲಿ, ಮಹಾಪೂಜೆ, (ಮಧ್ಯಾಹ್ನ 12.30ಕ್ಕೆ) ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸಾಯಂಕಾಲ ಶ್ರೀ ಮನ್ಮಹಾರಥೋತ್ಸವ, ಭೂತಬಲಿ ಶಯನೋತ್ಸವ, ಕವಾಟ ಬಂಧನ ಮೇ.13 ಸೋಮವಾರ ತುಲಾಭಾರ ಸೇವೆ, ಕವಾಟೋದ್ಘಾಟನೆ, ಭಕ್ತಾದಿಗಳ ತುಲಾರೋಹಣ, ನಿತ್ಯಬಲಿ, ವಸಂತ ಸಮಾರಾಧನೆ ರಾತ್ರಿ ಅವಭ್ರತ ಸ್ನಾನ, ಕಟ್ಟೆಪೂಜೆ ಪೂರ್ಣಾಹುತಿ. ಮೇ.14ನೇ ಮಂಗಳವಾರ ಸಂಪ್ರೋಕ್ಷಣೆ, ಕುಂಭಾಭಿಷೇಕ, ಫಲ-ಮಂತ್ರಾಕ್ಷತೆ ಇತ್ಯಾದಿ, ಮಧ್ಯಾಹ್ನ ಸಂತರ್ಪಣೆ ರಾತ್ರಿ ಮಾರಿಪೂಜೆ ನಡೆಯಲಿದೆ.ಮೇ.12 […]