ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ “ಎಜುಪಾತ್” ಕಾರ್ಯಕ್ರಮವನ್ನು ಉದ್ಘಾಟನೆ

ಮಂಗಳೂರು: ವಿದ್ಯಾರ್ಥಿಗಳು ತಾವು ಯಾವುದೇ ಕ್ಷೇತ್ರದಲ್ಲಿ ಮುಂದುವರೆದರೂ ಕೂಡ ಕಠಿಣ ಪರಿಶ್ರಮ ಮತ್ತು ವಿನಮ್ರತೆಯನ್ನು ರೂಢಿಸಿಕೊಳ್ಳಬೇಕು. ಸತತ ಪ್ರಯತ್ನ ಹಾಗೂ ಸರಿಯಾದ ಯೋಜನೆಗಳು ನಮ್ಮನ್ನು ಉನ್ನತಿಯತ್ತ ಕೊಂಡೊಯ್ಯುತ್ತದೆ ಎಂದು ಯುಪಿಎಸ್‍ಸಿ ಪರೀಕ್ಷೆಯಲ್ಲಿ 2ನೇ ರಾಂಕ್ ಪಡೆದ ಎಕ್ಸ್‍ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ವರದರಾಜ್ ಗಾಂವ್ಕರ್ ಅವರು ಹೇಳಿದರು. ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜು, ಮಂಗಳೂರು ಹಮ್ಮಿಕೊಂಡ “ಎಜುಪಾತ್” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಅಖಿಲ ಭಾರತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿವಿಧ ಮಾರ್ಗಗಳು ಮತ್ತು ತಂತ್ರಗಳ […]

ಉಡುಪಿ ಬನ್ನಂಜೆಯಲ್ಲಿ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳ ಮಳಿಗೆ ‘ಉಡುಪಿ ಸ್ಟೋರ್ಸ್ ಉದ್ಘಾಟನೆ

ಉಡುಪಿ: ಉಡುಪಿ ವಿ21 ಗ್ರೂಪ್ ನವರಿಂದ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳ ನೂತನ ಮಳಿಗೆ “ಉಡುಪಿ ಸ್ಟೋರ್ಸ್*ನ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ಶುಕ್ರವಾರ ಉದ್ಘಾಟನೆ ನಡೆಯಿತು. ಈ ಮಳಿಗೆ ದಿನದ 24 ಗಂಟೆಯೂ ತೆರೆದಿರುತ್ತದೆ. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು. ಉಡುಪಿಯ ಆಹಾರೋತ್ಪನ್ನಗಳಿಗೆ ಎಲ್ಲ ಕಡೆ ಬೇಡಿಕೆಯಿದೆ. ಸಮಾಜಕ್ಕೆ ಶುಚಿ-ರುಚಿಯಾದ ಗುಣಮಟ್ಟದ ಆರೋಗ್ಯಪೂರ್ಣ ಆಹಾರವನ್ನು ಒದಗಿಸುವ ಮಹದಾಸೆಯಿಂದ ಆರಂಭಿಸಲ್ಪಟ್ಟ ಈ ಮಳಿಗೆ ಯಶಸ್ವಿಯಾಗಲಿದೆ ಎಂದು […]

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ಬಿ.ಎಸ್.ಯಡಿಯೂರಪ್ಪ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ […]

ಜಿಲ್ಲಾ ಕಾರಾಗೃಹದಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತ್ಯು.

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ನಿನ್ನೆ ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಜೈಲು ಕೈದಿ ಅನೂಪ್ ಕುಮಾರ್ ಶೆಟ್ಟಿ ಎಂದು ತಿಳಿದು ಬಂದಿದೆ. ಕುಂದಾಪುರದಲ್ಲಿ ಮೂರು ವರ್ಷದ ಹಿಂದೆ ನಡೆದ ಉದ್ಯಮಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಆರೋಪಿಯಾಗಿದ್ದ ಎಂದು ತಿಳಿಯಲಾಗಿದೆ. ವಿಚಾರಣಾ ಖೈದಿಯಾಗಿದ್ದ ಅನೂಪ್ ಕಾಯಿಲೆಯಿಂದ ಬಳಲುತ್ತಿದ್ದ. ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.