ಬಾರ್ಕೂರ್ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಕ್ಯಾಂಪಸ್ ಇಂಟರ್ವ್ಯೂ.

ಉಡುಪಿ: ಬಾರ್ಕೂರ್ ಹೆರಾಡಿ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ ಹಾಗೂ ಜೂ ತಿಂಗಳಲ್ಲಿ ಕ್ಯಾಂಪಸ್ ಇಂಟರ್ವ್ಯೂ ನಡೆಯಲಿದ್ದು, ಕ್ಯಾಂಪಸ್ ಇಂಟರ್ವ್ಯೂನ ದಿನಾಂಕ, ಸಂಸ್ಥೆಯ ಹೆಸರು ಹಾಗೂ ಹುದ್ದೆಗಳು ಹೀಗಿವೆ. ದಿನಾಂಕ:16-05-2024 ದಿನಾಂಕ: 20-05-2024 & 21-05-2024 ದಿನಾಂಕ: 03-06-2024 ದಿನಾಂಕ 05-06-2024 ದಿನಾಂಕ: 07-06-2024 ದಿನಾಂಕ: 10-06-2024 ದಿನಾಂಕ:15-06-2024 ವಿದ್ಯಾರ್ಥಿಗಳಿಗೆ ಅತ್ಯುತ್ತಮ ತಾಂತ್ರಿಕ ಶಿಕ್ಷಣ ತರಬೇತಿ:40 ವರ್ಷಗಳ ಹಿಂದೆ ಅಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೀರ್ತಿಶೇಷ ವಿ.ಎಲ್. ರೋಚ್‌ರವರ ದೂರದರ್ಶಿತ್ವದಿಂದ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಈ […]

ಹೊಸ ಆಡಳಿತ ಹೊಸ ಹುರುಪು: ಶ್ರೀ ರಾಮಾಶ್ರಮ ಪದವಿ ಪೂರ್ವ ಕಾಲೇಜಿಗೆ ತ್ರಿಶಾ ಸಂಸ್ಥೆಯ ಸಾಥ್

ಮಂಗಳೂರು ಕೊಂಚಾಡಿಯಲ್ಲಿರುವ ನೂರ ಏಳು ವರ್ಷದ ಇತಿಹಾಸವಿರುವ ರಾಮಾಶ್ರಮ ಟ್ರಸ್ಟ್ ನಡೆಸುತ್ತಿದ್ದ ಶ್ರೀ ರಾಮಾಶ್ರಮ ಪಿಯು ಕಾಲೇಜು, ವಾಣಿಜ್ಯ ಕ್ಷೇತ್ರದಲ್ಲಿ ವೃತ್ತಿಪರ ಶಿಕ್ಷಣದ ತರಬೇತಿ ನೀಡುತ್ತಿರುವ ತ್ರಿಶಾ ಸಂಸ್ಥೆಯ ನೂತನ ಆಡಳಿತದೊಂದಿಗೆ ಪದವಿಪೂರ್ವ ಕಾಲೇಜನ್ನು ನಡೆಸುತ್ತಿದ್ದು ಶಿಕ್ಷಣ ಪ್ರಿಯರ ನೆಚ್ಚಿನ ಆಯ್ಕೆಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ನೂರ ಏಳು ವರ್ಷಗಳ ಅನುಭವವಿರುವ ರಾಮಾಶ್ರಮ ಟ್ರಸ್ಟ್ ನ ಸೇವೆಯ ಜೊತೆಗೆ ಬದಲಾಗುತ್ತಿರುವ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ತ್ರಿಶಾ ಸಂಸ್ಥೆಯ ಒಡಂಬಡಿಕೆ ಕಾಲೇಜಿಗೆ ಹೊಸ ಹುರುಪನ್ನು ತಂದಿದೆ.ವಾಣಿಜ್ಯ ವಿಭಾಗದಲ್ಲಿ […]

ರಾಜ್ಯ ಪ್ರೌಢ ಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ: ಇಂದಿನಿಂದ SSLC ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

ಪುತ್ತೂರು: ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು.

ಪುತ್ತೂರು: ಪುರುಷರಕಟ್ಟೆಯಲ್ಲಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ […]

ಜೂ.7, 8ರಂದು ವಿದ್ಯಾಗಿರಿ ಕ್ಯಾಂಪಸ್’ನಲ್ಲಿ ಆಳ್ವಾಸ್ ಪ್ರಗತಿ-2024 ಉದ್ಯೋಗ ಮೇಳ

137ಕ್ಕೂ ಹೆಚ್ಚು ಕಂಪನಿಗಳು ಭಾಗಿ, 20 ಸಾವಿರಅಭ್ಯರ್ಥಿಗಳ ನಿರೀಕ್ಷೆ. ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದರೆ14ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಜೂ.7, 8ರಂದು ವಿದ್ಯಾಗಿರಿ ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದು, 20 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಳ್ವ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ಉದ್ಯೋಗ ಮೇಳದಲ್ಲಿ 137ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು 68 ಕಂಪನಿಗಳು ನೊಂದಾಯಿಸಿಕೊಂಡಿವೆ ಎಂದರು. ಆಳ್ವಾಸ್ ಪ್ರತಿಷ್ಠಾನವು ಈವರೆಗೆ […]