ಉಡುಪಿ: ಮಾನಸಿಕವಾಗಿ ನೊಂದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ. ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು. ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ […]

ಮಲ್ಪೆ ಬೀಚ್: ಪ್ರವಾಸೀ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ.

ಉಡುಪಿ: ರಾಜ್ಯದ ಸಮುದ್ರ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವಂತಹ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮೇ 16 ರಿಂದ ಸೆಪ್ಟೆಂಬರ್ 15 ರವರೆಗೆ ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಸ್ಥಗಿತಗೊಳಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಇಂಡೋನೇಷ್ಯಾ: ಜ್ವಾಲಾಮುಖಿ ಸ್ಪೋಟದಿಂದ ಭಾರಿ ಪ್ರವಾಹ, ಮನೆಗಳು ಜಲಾವೃತ, ಮೃತರ ಸಂಖ್ಯೆ 50ಕ್ಕೆ ಏರಿಕೆ.

ಇಂಡೋನೇಷ್ಯಾ: ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಬಳಿಕ ಸಂಭವಿಸಿದ ಪ್ರವಾಹದಿಂದ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ.ಭಾನುವಾರ 37 ಮಂದಿ ಸಾವಿಗೀಡಾಗಿದ್ದರು. ಇಂದು ಅವಶೇಷಗಳ ಅಡಿಯಿಂದ 50 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪಶ್ಚಿಮ ಸುಮಾತ್ರಾ ವಿಪತ್ತು […]

ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ.

ಉಡುಪಿ: ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಶ್ರೀ ರವಿಶಾಸ್ತ್ರಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರೀಯ ಶ್ರೀಪಾದರಿಂದ ಅನುಗ್ರಹ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಪಾದರ ಮುಖ್ಯಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯ್ತಪಡಿಸಿದ್ದಾರೆ. ಪೂಜ್ಯ ಪುತ್ತಿಗೆ ಕಿರಿಯ ಶ್ರೀಪಾದರು ಉಡುಪಿಯ ಬಾಲ ಕೃಷ್ಣನಿಗೆ ವಿಧ ವಿಧದ ಅಲಂಕಾರ ಮಾಡುತ್ತ […]