ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುನಿಕೋರ್ಟ್ ಕೋಡ್ ಫೆಸ್ಟ್ ಕಾರ್ಯಾಗಾರ
ಉಡುಪಿ: ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ದಿನಾಂಕ 15 ಮೇ 2024 ರಂದು ಮಂಗಳೂರಿನ ಪ್ರತಿಷ್ಠಿತ ತಂತ್ರಜ್ಞಾನ ಸಂಸ್ಥೆಯಾದ ಮಂಗಳೂರು ಇನ್ಫೋಟೆಕ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್‍ನ ಅಂಗ ಸಂಸ್ಥೆಯಾದ “ಯುನಿಕೋರ್ಟ್” ವತಿಯಿಂದ ಒಂದು ದಿನದ “ಕೋಡ್ ಫೆಸ್ಟ್” ಕಾರ್ಯಾಗಾರ ಮತ್ತು ಸ್ಪರ್ಧೆ ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 174 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಯುನಿಕೋರ್ಟ್‍ನ ಮಾನವ ಸಂಪನ್ಮೂಲ ಅಧಿಕಾರಿಗಳಾದ ಶ್ರೀಮತಿ ಚಂದ್ರಾಣಿ ಮತ್ತು ತಂಡದವರು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ […]
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರವಿಶಾಸ್ತ್ರಿಯವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ವೀಕ್ಷಕ ವಿವರಣೆಕಾರ ಶ್ರೀಯುತ ರವಿಶಾಸ್ತ್ರಿಯವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಹಾಗೂ ಶ್ರೀಸುಬ್ರಹ್ಮಣ್ಯ ಮಠದ ಸಂಪುಟ ನರಸಿಂಹ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಾಲಯದ ವತಿಯಿಂದ ಗೌರವಿಸಲಾಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಮಠದಲ್ಲಿ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಶ್ರೀಯುತ ರವಿಶಾಸ್ತ್ರಿಯವರನ್ನು ಶಾಲು ಹೊದೆಸಿ ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಶ್ರೀವೆಂಕಟರಾಜ, ಶ್ರೀವಾದಿರಾಜ ಪೆಜತ್ತಾಯ, ಶ್ರೀಪಿ.ಲಾತವ್ಯ ಆಚಾರ್ಯ ಉಪಸ್ಥಿತರಿದ್ದರು.