ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಂಪನ್ನಗೊಳ್ಳಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಶ್ರೀ ಗಣೇಶ ಸರಳಾಯ ಅವರ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸುವುದರೊಂದಿಗೆ ಚಾಲನೆ ನೀಡಲಾಯಿತು.ಕ್ಷೇತ್ರದಲ್ಲಿ ತೋರಣ ಮಹೂರ್ತ ಉಗ್ರಾಣಮಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು, ಸಪ್ತ ಶುದ್ದಿ ಪ್ರಾಸಾದ […]

ಉಡುಪಿ “ಸ್ಪೀಚ್ ಆ್ಯಂಡ್ ಹಿಯರಿಂಗ್ ಕೇರ್ ಸೆಂಟರ್” ನಲ್ಲಿ ಉಚಿತ ಶ್ರವಣ ಪರೀಕ್ಷಾ ಶಿಬಿರ ಯಶಸ್ವಿ

ಉಡುಪಿ: ಉಡುಪಿ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಮತ್ತು OTICON ಪ್ರಾಯೋಜಕತ್ವದಲ್ಲಿ ಉಡುಪಿ ಕೋರ್ಟ್ ಬಳಿಯ ದೇವರಾಜ್ ಟವರ್ಸ್ ಒಂದನೇ ಮಹಡಿಯಲ್ಲಿ ಆಯೋಜಿಸಿದ ಎರಡು ದಿನಗಳ ಉಚಿತ ಶ್ರವಣ ತಪಾಸಣೆ ಶಿಬಿರಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಶಿಬಿರವು ಯಶಸ್ವಿಯಾಗಿದೆ. ಆಡಿಯಾಲಾಜಿಸ್ಟ್ ಮತ್ತು ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ನ ನಿರ್ಮಲ ಪ್ರಭು ಅವರ ನೇತೃತ್ವದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧ ಭಾಗದ ಜನರು ಈ ಒಂದು ಉಚಿತ ಶ್ರವಣ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಇಲ್ಲಿ […]

ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ.

ಬಂಟ್ವಾಳ: ಎನ್ ಡಿಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಬಂಟ್ವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್ […]

ಪಳ್ಳಿ: ಟಿಪ್ಪರ್- ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ.

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಪಳ್ಳಿ ಗರಡಿ ಸಮೀಪ ಸಂಭವಿಸಿದೆ. ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ […]

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ.

ರಾಜ್ಯದಲ್ಲಿ ಜೂನ್‌ ಮೊದಲನೇ ವಾರದಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಜೂನ್‌ ಮೊದಲ ವಾರದಲ್ಲಿ ಅಂದರೆ ಅಂದಾಜು ಜೂ.5ರಂದು ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಗಳಿವೆ. ಕಳೆದ ವರ್ಷ ರಾಜ್ಯದಲ್ಲಿ ಬರ ಉಂಟಾಗಿದ್ದ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ ವಾಗಿ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿ ವಾಡಿಕೆಯಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ. ಸುಮಾರು ಮೇ 22ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ […]