ಹಿರಿಯ ನಾಗರಿಕರಿಗಾಗಿ ಮಾರ್ಗ ಟೀಮ್ ವತಿಯಿಂದ ವಿಶೇಷ ಟೂರ್ ಪ್ಯಾಕೇಜ್

ಉಡುಪಿ: ದಿ :31 ಮೇ 2024 ರಂದು ಮಾರ್ಗ ಟೀಮ್ ವತಿಯಿಂದ ಹಿರಿಯ ನಾಗರಿಕರಿಗಾಗಿ ಪ್ರಸಿದ್ಧ ದೇವಸ್ಥಾನಗಳ ದರ್ಶನ ಹಾಗೂ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ .ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ;ಟೀಮ್ ಮಾರ್ಗಮೊ : 9113009028,9591982777

ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ

ಉಡುಪಿ, ಮೇ 21: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ರಾಜ್ಯಕ್ಕೆ ದ್ವಿತೀಯ.

ಕುಂದಾಪುರ: ದ್ವಿತೀಯ ಪಿಯುಸಿ 2 ನೇ ಹಂತದ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ವಿಜ್ಞಾನ ವಿಭಾಗದಲ್ಲಿ 597 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು,ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಅಗ್ರ ಗಣ್ಯ ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಅಪೂರ್ವ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಉಡುಪಿ: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ […]

ಬಂಟ್ವಾಳ: ಹಿಟ್ ಆಂಡ್ ರನ್ – ಓರ್ವ ಮೃತ್ಯು.

ಬಂಟ್ವಾಳ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ‌ ಹೊಡೆದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ, ಪುತ್ತೂರು ನೆಹರುನಗರ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಅವಿವಾಹಿತನಾಗಿದ್ದು ತಾಯಿ ಜೊತೆ ವಾಸವಾಗಿದ್ದರು. ಮೃತರು ತಾಯಿ ಹಾಗೂ ಐವರು ಸಹೋದರರನ್ನು ಅಗಲಿದ್ದಾರೆ. ಈ […]