“ಸಮಾನತೆಯಿಂದ ಜಗತ್ತಿನ ಪ್ರಗತಿ” ಎಂಬ ವಿಷಯದ ಕುರಿತು ಉಪನ್ಯಾಸ.

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಕೋಶವು ಎನ್‍ಸಿಸಿ ಘಟಕದ ಸಹಯೋಗದೊಂದಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ದಿನಾಂಕ 17 ಮೇ 2024 ರಂದು ಸಮಾನತೆಯಿಂದ ಜಗತ್ತಿನ ಪ್ರಗತಿ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮಾಜಿ ಉಪ ಪ್ರಾಂಶುಪಾಲರಾದ ದೀಪಾ ಭಂಡಾರಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ದೀಪಾ ಭಂಡಾರಿಯವರು ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿ, ಮಹಿಳೆಯರ ಬಗೆಗಿನ ಗೌರವವು ಮಹಿಳಾ ದಿನಾಚರಣೆಯಂದು ಮಾತ್ರ […]

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮುಖ್ಬಾರ್ ನೇಮಕ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮುಖ್ಬಾರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರ್ ಬೊಲ್ಲಾಹಿಯಾನ್, ಪೂರ್ವ ಅರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ ದೇಶದ ವಾಯುವ್ಯದ […]

ಕಾರ್ಕಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

ಕಾರ್ಕಳ : ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮೂಲ್ಯ(62) ಆತ್ಮಹತ್ಯೆಗೆ ಶರಣಾದವರು. ಮೇ 19 ರ ರಾತ್ರಿಯಿಂದ 20ರ ಬೆಳಿಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಇವರು ಮನೆ ಹತ್ತಿರ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ: ಶಾಸಕ ಹರೀಶ್ ಪೂಂಜ

ಪುತ್ತೂರು: ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿಡಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಇಲ್ಲಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ನಮ್ಮ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ […]

ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಇಲಾಖೆಯವೆಬ್‌ಸೈಟ್ www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.