ಮಂಗಳೂರಿನಲ್ಲಿ 24ರಿಂದ ನಾಂದಿ ರಂಗಾಯಣ ನಾಟಕೋತ್ಸವ.

ಮೈಸೂರು ರಂಗಾಯಣದ 2023-24 ನೆ ಸಾಲಿನ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳ ಅಭಿನಯ ಮೂರು ನಾಟಕ ಗಳ ಪ್ರದರ್ಶನದ ನಾಂದಿ ನಾಟಕೋತ್ಸವವು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಮೇ 24 ರಿಂದ 26 ರ ತನಕ ಪ್ರತಿದಿನ ಸಂಜೆ 7.00 ಕ್ಕೆ ನಡೆಯಲಿದೆ. ಅರೆಹೊಳೆ ಪ್ರತಿಷ್ಠಾನ ಆಯೋಜಿಸಿರುವ ಈ ನಾಟಕೋತ್ಸವವು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾಭಿ (ರಿ) ಮಂಗಳೂರು ಸಹಕಾರದಲ್ಲಿ ನಡೆಯಲಿದೆ. […]
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರಪರಿವಾರ ದೇವರುಗಳಿಗೆ ಸ್ನಪನ ಕಲಶ ಅಭಿಷೇಕ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಆದ್ಯ ಗಣಪತಿಯಾಗ ಸಫರಿವಾರ ದೇವರುಗಳಿಗೆ ಪ್ರಧಾನ ಯಾಗ ಸ್ನಪನ ಕಲಶಾಭಿಷೇಕ ಪ್ರಸನ್ನ ಪೂಜೆ ಮಹಾಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ ನೆರವೇರಿತು.ಕ್ಷೇತ್ರ ಧರ್ಮದ ಶ್ರೀ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀ ಗಣೇಶ್ ಸರಳಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಅವರು ದಕ್ಷಿಣ […]
“ಮನೆಯೇ ಗ್ರಂಥಾಲಯ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ.

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ” ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು. ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ ಹಿಂದೆ ನಾವು ಕಂಡುಕೊಂಡ ಮುದ್ರಣ ಮಾಧ್ಯಮದ ಆವಿಷ್ಕಾರದಿಂದಾಗಿ ಗಳಿಸಿದ ಜ್ಞಾನ […]