ಬಂಟ್ವಾಳ: ವಿದ್ಯುತ್ ಶಾಕ್’ಗೆ ವ್ಯಕ್ತಿ ಬಲಿ.
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ. ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಗುರುವಾರ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ
ಉಡುಪಿ, ಮೇ 24: ಕೌಶಲ್ಯಾಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯಯು ಮೇ 15 ರಿಂದ 19 ರ ವರೆಗೆ ದೆಹಲಿಯ ದ್ವಾರಕಾದಲ್ಲಿ ಆಯೋಜಿಸಿದ ರಾಷ್ಟ್ರದ ಅತೀ ದೊಡ್ಡ ಕೌಶಲ್ಯ ಸ್ಪರ್ಧೆಯಾದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ್ದ ಉಡುಪಿಯ ರೋಹನ್ ಕೋಟ್ಯಾನ್ ಅವರು ಡ್ರೋನ್ ಫಿಲ್ಮ್ ಮೇಕಿಂಗ್ ನಲ್ಲಿ ಚಿನ್ನದ ಪದಕವನ್ನು ಗಳಿಸಿದ್ದು, ಸೆಪ್ಟೆಂಬರ್- 2024 ರಲ್ಲಿ ಫ್ರಾನ್ಸ್ನ ಲಿಯೋನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯ ನಿವಾಸಿಯಾದ ಶಶಿಧರ […]
ಉಡುಪಿ: ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರ್ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣೆ
ಉಡುಪಿ: ಉಡುಪಿ ಶ್ರೀ ಪಲಿಮಾರು ಮಠದ ಯೋಗದೀಪಿಕಾ ಟ್ರಸ್ಟ್ ಇವರು, ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಯೋಗದಲ್ಲಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರ್ ಇದರ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭವು ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದಾದರೂ ಶ್ರದ್ಧೆ ಮತ್ತು ಕಠೀಣ ಪರಿಶ್ರಮ ಬೇಕಾಗುತ್ತದೆ. ನಮ್ಮ ಸಂಸ್ಥೆಯಲ್ಲಿ ಕಲಿಯುವಂತ ವಿದ್ಯಾರ್ಥಿಗಳಿಗೆ ಸ್ವಂತ ಉದ್ಯೋಗ ಅಥವಾ ಬೇರೆ ಸಂಸ್ಥೆಗಳಲ್ಲಿ […]
ಡಾ.ವಿ.ಎಸ್ ಆಚಾರ್ಯ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ, ದಿ.ಡಾ.ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ.ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ. ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ನಿಕಟಪೂರ್ವ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೆಳೆಗಳಿಗೆ ರೋಗ ಕಂಡುಹಿಡಿಯುವ ವೆಬ್ ಅಪ್ಲಿಕೇಶನ್ ಅಭಿವೃದ್ಧಿ.
ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ರಹ ಮತ್ತು ನ್ನೀಸಾ, ರಾಶಿ, ರಿಮ್ಶಾ ಮತ್ತು ಸುಮಂತ್ ಮುತಾಲಿಕ್ ಇವರು ವಿಭಾಗದ ಪ್ರಾಧ್ಯಾಪಕಿಯಾದ ಚಂದನ ಇವರ ಮಾರ್ಗದರ್ಶನದಲ್ಲಿ ಬೆಳೆಗಳಿಗೆ ಬರುವ ರೋಗಗಳನ್ನು ಪೂರ್ವಭಾವಿಯಾಗಿ ಕಂಡುಹಿಡಿಯುವ ವೆಬ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಸಾಮಾನ್ಯವಾಗಿ ಯಾವುದೇ ರಾಷ್ಟ್ರದ ಬೆನ್ನೆಲುಬಾಗಿ ಪರಿಗಣಿಸಲ್ಪಡುವ ಕೃಷಿಯು ಮಾನವ ಜೀವನ ಮತ್ತು ಆರ್ಥಿಕ ಸ್ಥಿರತೆ ಎರಡನ್ನೂ ಉಳಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆದರೆ […]