ಗುಜರಾತ್: ರಾಜ್ಕೋಟ್’ನ ಗೇಮಿಂಗ್ ಝೋನ್ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವು.
ಗುಜರಾತ್: ಗುಜರಾತ್ನ ರಾಜ್ಕೋಟ್ನಲ್ಲಿರುವ ಗೇಮಿಂಗ್ ಝೋನ್ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಪ್ಪತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದವರನ್ನು ರವಾನಿಸಲಾಗಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಟಿಆರ್ಪಿ ಗೇಮಿಂಗ್ ಝೋನ್ಗೆ ಅಧಿಕಾರಿಗಳಿಂದ ಅಗತ್ಯ ಅಗ್ನಿ ಸುರಕ್ಷತಾ ಕ್ಲಿಯರೆನ್ಸ್ ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಟಿಆರ್ಪಿ ಆಟದ ವಲಯದ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ರಾಜ್ಕೋಟ್ ನಗರ ಪೊಲೀಸ್ ಕಮಿಷನರ್ ಭಾರ್ಗವ ತಿಳಿಸಿದ್ದಾರೆ.
ಉಡುಪಿ: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ
ಉಡುಪಿ: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ […]
ಉಡುಪಿ ನಗರದ ಹಳೇ ಬಸ್ ನಿಲ್ದಾಣ; ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂ.
ಉಡುಪಿ: ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಉಡುಪಿ ನಗರದ ಹಳೇ ಬಸ್ ನಿಲ್ದಾಣ ಸಮೀಪದ ಕೃಷ್ಣಾ ಕಾಂಪ್ಲೆಕ್ಸ್ ಶ್ರೀ ನಾಗ ದೇವರ ಸನ್ನಿಧಿಯ ಪಕ್ಕದ 100 ಮೀ ಆವರಣದ ಗೋಡೆ ಕುಸಿದು 3 ದ್ವಿ ಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದೆ. ಇದರಿಂದ ಸಾವಿರಾರು ರೂ. ನಷ್ಟವಾಗಿದೆ ಸಮೀಪದ 2 ಅಂಗಡಿಗೆ ಮಳೆಯ ನೀರು ನುಗ್ಗಿ ಸ್ವಲ್ಪ ಪ್ರಮಾಣದ ಹಾನಿಯಾಗಿದೆ. ಇದು ಬೋರ್ಡ್ ಶಾಲೆಯ ಆವರಣದ ಗೋಡೆ ಯಾಗಿದ್ದು, ಈ ಹಿಂದೆಯೂ ಎರಡು ಬಾರಿ ಆವರಣ […]
ನಿಮ್ಮ ಸರಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಸಿಎಂ ಸಿದ್ದರಾಮಯ್ಯನವರಿಗೆ ಸುನಿಲ್ ಕುಮಾರ್ ಪ್ರಶ್ನೆ.
ಕಾರ್ಕಳ: ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ಗಳಿಗೆ ಆಳುವ ಸರಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್, ಉಡುಪಿ-ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ […]
ಉಡುಪಿ: ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭೇಟಿ.
ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ.ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು. ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ […]