ಮಣಿಪಾಲ: ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಮೇ.26: ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮಣಿಪಾಲವು, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಹಯೋಗದೊಂದಿಗೆ ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಭಾನುವಾರ, ಮೇ 26 ರಂದು ಶ್ರೀ ಶ್ರೀನಿವಾಸ ಪೈ ಪ್ರಸನ್ನ ಸೇವಾ ಮಂದಿರ ಸಭಾಂಗಣ, ಪರ್ಕಳ ಇಲ್ಲಿ ಆಯೋಜಿಸಿತ್ತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮಣಿಪಾಲದ ಅಧ್ಯಕ್ಷರಾದ ಶ್ರೀ ಸೋಮನಾಥ ಶೆಟ್ಟಿಯವರು ಉಪಸ್ಥಿತರಿದ್ದರು. ಗೌರವ ಅತಿಥಿಗಳಾಗಿ ಮಾಹೆ ಮಣಿಪಾಲದ […]

ಅಂತರ್‌ಕಾಲೇಜು ರಸಪ್ರಶ್ನೆ ಸ್ಪರ್ಧೆ

ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಉಡುಪಿ ಇಲ್ಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವತಿಯಿಂದ ಅಂತರ್ ಕಾಲೇಜು ಮಟ್ಟದ ‘ನಿಮ್ಮ ಪ್ರಪಂಚವನ್ನು ತಿಳಿಯಿರಿ’ ಎಂಬ ರಸಪ್ರಶ್ನಾ ಸ್ಪರ್ಧೆಯನ್ನು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕ್ವಿಜ್ ಮಾಸ್ಟರ್, ಪ್ರೊ ಪ್ರಭಾಕರ ಶಾಸ್ತ್ರಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯ್ಕ್ ವಹಿಸಿದ್ದರು.ರಸಪ್ರಶ್ನೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸುಮಾರು 40 ತಂಡಗಳು ಭಾಗವಹಿಸಿದ್ದವು. […]

ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯ ಬೇಕು: ರೋಹನ್ ಮೊಂತೇರೊ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರ ಇನ್ನಷ್ಟು ಬೆಳೆಯಲು ಬೇಕಾದ ನೈಸರ್ಗಿಕ ಸೌಲಭ್ಯ ವನ್ನು ಹೊಂದಿದೆ.ಮಂಗಳೂರು ಜಲ, ವಾಯು, ನೆಲ ಸಾರಿಗೆ ಸಂಪರ್ಕ ಹೊಂದಿರುವ ನಗರ.ಹೆಚ್ಚು ಸುಶಿಕ್ಷಿತ […]

ಉಡುಪಿ: ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ – ಶ್ರೀನಿಧಿ ಹೆಗ್ಡೆ

ಉಡುಪಿ: ಉಡುಪಿ ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹಲ್ಲೆ ನಡೆಸಿ ವಾರ ಕಳೆದರೂ ಪೋಲಿಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗಿದೆ. ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಗರುಡ ಗ್ಯಾಂಗಿನ ಪುಂಡರ ಮೇಲೆ ಗೂಂಡಾ ಕಾಯ್ದೆಯನ್ನು ಯಾಕೆ ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. ಮೇ.18 ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ […]