ಪಡುಬಿದ್ರಿ: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು.

ಪಡುಬಿದ್ರಿ: ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಪಡುಬಿದ್ರೆಯ ಬಡ ಎರ್ಮಾಳು ಹತ್ತಿರ ನಡೆದಿದೆ. ಬಡಾ ಎರ್ಮಾಳು ಕಲ್ಯಾಣಿ ಬಾರ್ ಎದುರಿನ ರಿಕ್ಷಾ ನಿಲ್ದಾಣದತ್ತ ರವಿವಾರ ಸಂಜೆ ವೇಳೆ ನಡೆದು ಬರುತ್ತಿದ್ದ ಬಡಾ ಗ್ರಾಮದ ನಿವಾಸಿ ರಮೇಶ್(66) ಅವರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ಕಾರೊಂದು ಢಿಕ್ಕಿಯಾಗಿ ತಲೆಗೆ ತೀವ್ರ ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೇ.26 ರಾತ್ರಿ ಮೃತಪಟ್ಟಿದ್ದಾರೆ. ಚಾಲಕನ ಅತೀ ವೇಗ ಹಾಗೂ ಅಜಾಗ್ರತೆಯ ಚಾಲನೆಯೇ […]

ಅಂಬಾತನಯ ಮುದ್ರಾಡಿ ಸಾಹಿತ್ಯದ ಮೂಲಕ ಜೀವಂತ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಅಂಬಾತನಯ ಮುದ್ರಾಡಿ ಅವರ ಜೀವನ ಸಾಧನೆ ಮಾದರಿಯಾಗಿದ್ದು, ಅವರೀಗ ನಮ್ಮ ನಡುವೆ ಇಲ್ಲದಿದ್ದರೂ ಅವರ ಕೃತಿ, ಮಾತು, ಭಾಷಾ ಸಾಹಿತ್ಯದಿಂದ ಜೀವಂತವಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಮುದ್ರಾಡಿ ಶಾಲಾ ವಠಾರದಲ್ಲಿ ಶನಿವಾರ ಪ್ರಸಿದ್ಧ ಸಾಹಿತಿ, ಹರಿದಾಸ, ಅರ್ಥಧಾರಿ, ಪ್ರವಚನಕಾರ, ಚಿಂತಕ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಿಯ ಆರಾಧಕರಾಗಿ ಅಂಬಾತನಯ ಎಂಬ ಕಾವ್ಯ ನಾಮದಿಂದ ರಾಜ್ಯಾದ್ಯಂತ ಪ್ರಸಿದ್ಧಿ ಪಡೆದು, […]

ಮೇ.29ರಂದು ಗಣಿತನಗರ ಶ್ರೀ ಮಹಾಗಣಪತಿ ದೇವಾಸ್ಥಾನದ ಪ್ರತಿಷ್ಠಾ ಮಹೋತ್ಸವ.

ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವವು ಮೇ29 ಬುಧವಾರದಂದು ನಡೆಯಲಿದೆ. ಅಂದಿನ ಸಭಾ ಕಾರ್ಯಕ್ರಮ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಎಸ್.ಎಸ್.ಎಲ್.ಸಿ., ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಜ್ಞಾನಸುಧಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ವತಿಯಿಂದ 68.79ಲಕ್ಷ ರೂ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು 22 ಡಿಸೆಂಬರ್ […]

ಉಡುಪಿ: ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)ನಲ್ಲಿ ಪ್ರವೇಶಾತಿ ಆರಂಭ.

ಉಡುಪಿ: ಚಿಟ್ಪಾಡಿ ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)ನಲ್ಲಿ 2024 25ರ ಪ್ರವೇಶಾತಿ ಆರಂಭಗೊಂಡಿದ್ದು, ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಕೋರ್ಸ್‌ಗಳು:◼️ ಎಲೆಕ್ಟ್ರಿಷಿಯನ್◼️ ಫಿಟ್ಟರ್◼️ ಎಂ.ಎಂ.ವಿ./ಆಟೋಮೊಬೈಲ್◼️ ಮೆಕ್ಯಾನಿಕ್ ಡೀಸೆಲ್ (1ವರ್ಷ) ಸೇಂಟ್ ಮೇರಿಸ್ ಐಟಿಐ ಅನ್ನು ಆಯ್ಕೆ ಮಾಡಲು ಕಾರಣಗಳು:🔹ಅರ್ಹ ಮತ್ತು ಅನುಭವಿ ಅಧ್ಯಾಪಕರಿಂದ ತೀವ್ರವಾದ ತರಬೇತಿ.🔹ಉದ್ಯಮ ಸಿದ್ಧ ಪಠ್ಯಕ್ರಮ.🔹ವಿದ್ಯಾರ್ಥಿವೇತನವನ್ನು ಪಡೆಯಲು ಮಾರ್ಗದರ್ಶನ🔹ಆನ್/ಆಫ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಮತ್ತು ಉದ್ಯೋಗ ಸಹಾಯ ಕಾರ್ಯಕ್ರಮ🔹ವ್ಯಕ್ತಿತ್ವ ಅಭಿವೃದ್ಧಿ ತರಬೇತಿ ಮತ್ತು ಕಾರ್ಯಕ್ರಮಗಳು ಸೌಲಭ್ಯಗಳು:🔹ಉತ್ಸಾಹಭರಿತ ಮತ್ತು ಅನುಭವಿ ತರಬೇತುದಾರರಿಂದ […]

ಬೆಳ್ತಂಗಡಿ: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತ್ಯು.

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ಕಾಲು ಜಾರಿ ಮನೆಯ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು ಕೃಷಿ ವೃತ್ತಿ ಮಾಡುತ್ತಿದ್ದರು. ತಮ್ಮ ಮನೆಯ ಕೆರೆಗೆ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. […]