ಹಿಂದೂಸ್ತಾನಿ ಗಾಯಕ ಪ್ರದೀಪ್ ಕುಕ್ಕುಡೆ ಇವರ “ಮೋರೆಯಾ ಮೋರೆಯಾ” ಗಾನ-ನೃತ್ಯ ವಿಡಿಯೋ ಹಾಡು ಬಿಡುಗಡೆ.
ಮಣಿಪಾಲ: ಹಿಂದೂಸ್ತಾನಿ ಗಾಯಕ ಪ್ರದೀಪ್ ಕುಕ್ಕುಡೆ ಇವರ “ಮೋರೆಯಾ ಮೋರೆಯಾ” ಗಾನ-ನೃತ್ಯ ವಿಡಿಯೋ ಹಾಡು ಶ್ರೀ ನರಸಿಂಹ ದೇವಸ್ಥಾನ ನರಸಿಂಗೆಯಲ್ಲಿ ಅತಿಥಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಈ ವಿಶೇಷ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಖೇಸ್ತರಾದ ರಮೇಶ್ ಸಾಲ್ವಂಕರ್, ಆನಂದ್ ನಾಯಕ್ ನರಸಿಂಗೆ, ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಒಪರೇಟಿವ್ ಸೊಸೈಟಿಯ ಆಡಳಿತ ನಿರ್ದೇಶಕರಾದ ನಿತ್ಯಾನಂದ್ ನಾಯಕ್ ನರಸಿಂಗೆ ಉಪಸ್ಥಿತರಿದ್ದರು. https://youtu.be/KiU_Yz8aXHI?si=z_GUpY_QSzSmEZ2B ಹಾಡನ್ನು ಅನಾವರಣಗೊಳಿಸಿ “ಮೋರೆಯಾ ಮೋರೆಯಾ” ಗಾನ-ನೃತ್ಯ ತಂಡಕ್ಕೆ ಶುಭ ಹಾರೈಸಿದರು. ಈ ಗಾನ-ನೃತ್ಯಕ್ಕೆ ಪ್ರದೀಪ್ ಕುಕ್ಕುಡೆಯವರ […]
ಕಾರವಾರ ಕ್ರೀಡಾ ವಸತಿನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 5 ನೇ ಹಾಗೂ 8 ನೇ ತರಗತಿಗಳ ಪ್ರವೇಶಾತಿಗೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ವಿಭಾಗಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಈ ಕೆಳಕಂಡ ದಿನಗಳಂದು ನಡೆಸಲಾಗುವುದು. ಮೇ.29 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಮೇ.30 ರಂದು ಉಡುಪಿಯ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಮೇ.31 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಲಾದೇವಿ ತಾಲೂಕು ಕ್ರೀಡಾಂಗಣದಲ್ಲಿ […]
ಬೈಂದೂರು: ಮೀನು ಹಿಡಿಯಲು ಹೋಗಿ ವ್ಯಕ್ತಿ ಕಾಲು ಜಾರಿ ನದಿಗೆ ಬಿದ್ದು ಮೃತ್ಯು.
ಬೈಂದೂರು: ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಸೌಪರ್ಣಿಕ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಾಕೆರೆ ಗ್ರಾಮದ ತೊಪ್ಲು ನಿವಾಸಿ ಮುಡೂರ ಎಂಬುವರ ಮಗ ಮಂಜು ಮೊಗವೀರ (57) ಎಂದು ಗುರುತಿಸಲಾಗಿದೆ. ಮಂಜು ಮೊಗವೀರ ಸಮುದ್ರ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ತೂಫಾನ್ ಇದ್ದ ಕಾರಣ ಮೀನುಗಾರಿಕೆಗೆ ತೆರಳಿರಲಿಲ್ಲ. ಅದೇ ಕಾರಣಕ್ಕೆ ಮನೆಯಲ್ಲಿ ಕೂರಲು ಮನಸ್ಸಾಗದೇ ಸೌಪರ್ಣಿಕಾ ನದಿಗೆ […]
ಜೂನ್1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ರಾಜ್ಯ ಸರ್ಕಾರ ಆದೇಶ.
ಉಡುಪಿ, ಮೇ.29: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 […]
ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ.
ಉಡುಪಿ: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 […]