ಲಂಚ ಸ್ವೀಕರಿಸುತ್ತಿದ್ದಾಗ ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಾರದ ಸಂತೆ ಆಯೋಜನೆ: ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದ ಪ್ರಾಂಗಣದಲ್ಲಿ ಸ್ಥಳೀಯ ಗ್ರಾಹಕರು/ ಸಾರ್ವಜನಿಕರಿಗೆ ಅಲ್ಲದೇ ಉಡುಪಿ ಸುತ್ತಮುತ್ತಲಿನ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕೃಷಿ ಸಂಬಂಧಿತ ವಿವಿಧ ಸಂತೆ/ ವಾರದ ಸಂತೆ ಆಯೋಜನೆ ಮಾಡಲು ಆಸಕ್ತರು, ಸಂಘ-ಸಂಸ್ಥೆಗಳು, ರೈತರು ಹಾಗೂ ಕೃಷಿ ಸಂಬಂಧಿತ ಸಂಘಗಳು ನಿಯಮಾನುಸಾರ ಮತ್ತು ಎ.ಪಿ.ಎಂ.ಸಿ ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಇವರ […]

ಕೋಟ ಮೂರ್ತೆದಾರರ ಸಹಕಾರಿ ಸಂಘ ಮಹಾಸಭೆ 302 ಕೋಟಿ ರೂ. ವ್ಯವಹಾರ, 1.06 ಕೋಟಿ ನಿವ್ವಳ ಲಾಭ.

ಕೋಟ: ಮೂರ್ತೆದಾರರ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ 302 ಕೋಟಿ ರೂ. ವ್ಯವಹಾರ ನಡೆಸಿ ರೂ. 1.06 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ. 12 ಡಿವಿಡೆಂಡ್‌ನ್ನು ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಜರುಗಿದ ಸಂಘದ 33ನೇ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಘೋಷಿಸಿದರು. ಸಂಘವು ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆ ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯಲ್ಲಿ 6 ಬ್ಯಾಂಕಿಂಗ್ ಶಾಖೆಗಳನ್ನು ಹೊಂದಿದ್ದು, ಶೀಘ್ರ ಬ್ಯಾಂಕಿಂಗ್ ಸೇವೆ ನೀಡುತ್ತಿದೆ. ಸಂಘವು 13124 […]

ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಿದ್ಧತೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು

ಉಡುಪಿ: ಸರ್ಕಾರದ ಪ್ರಸಕ್ತ ಸಾಲಿಗೆ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕ್ರಿಯಾಯೋಜನೆಗಳ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಸೂಚನೆ ನೀಡಿದರು. ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ:ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಮಳೆ, ಗಾಳಿ, ಸಿಡಿಲು ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಿಂದ ಜೀವಹಾನಿ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ […]

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ
ಕಾಲೇಜಿನ ಓರಿಯಂಟೇಶನ್-2024 ಕಾರ್ಯಕ್ರಮ

ಮಂಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ಒಂದು ನಿಖರವಾದ ಗುರಿಯನ್ನು ಹೊಂದಿರಬೇಕು ಆ ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಹಾಗೂ ಸ್ವಯಂ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ತಲುಪಲು ಸಾಧ್ಯ ಎಂದು ಎಕ್ಸ್ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಪ್ರೊ. ನರೇಂದ್ರ ಎಲ್ ನಾಯಕ್‍ ಅವರು ತಿಳಿಸಿದರು. ಅವರು ಮಂಗಳೂರಿನ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ […]