ಉಡುಪಿ: ಜೂನ್ 1ರಂದು ‘ಸಾಹಿತ್ಯ ಸಹವಾಸ’ ಸಂಭ್ರಮ.
ಉಡುಪಿ: ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯವು ಜೂನ್ 1ರಂದು ಉಡುಪಿಯಲ್ಲಿ ‘ಸಾಹಿತ್ಯ ಸಹವಾಸ’ ಎಂಬ ವಿಶಿಷ್ಟ ಸರಣಿ ಕಾರ್ಯಕ್ರಮವನ್ನು ಎಂಜಿಎಂ ಕಾಲೇಜು ರವೀಂದ್ರ ಮಂಟಪದಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯದ ಸಾಂಸ್ಕೃತಿಕ ಪರಂಪರೆ, ಕನ್ನಡದ ಪ್ರಮುಖ ಸಾಹಿತಿಗಳು, ಮತ್ತು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಂಭ್ರಮಿಸಲು ಇದನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ಕಾರ್ಯಕ್ರಮವನ್ನು ಕನ್ನಡದ ಹೆಸರಾಂತ ಸಾಹಿತಿಗಳಾದ ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ ಮತ್ತು ನವ್ಯ ಸಾಹಿತ್ಯ ಚಳುವಳಿ ಕುರಿತು ಅನಂತಮೂರ್ತಿಯವರು ನೀಡಿರುವ ಮೂರು ಉಪನ್ಯಾಸಗಳ ಸುತ್ತ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ, ಅನಂತಮೂರ್ತಿಯವರ […]
ಸ್ವಂತ ಮನೆಯ ಕನಸು ನನಸಾಗಿಸಲು “ಸಾಯಿ ಪಂಚಮಿ ರೆಸಿಡೆನ್ಸಿ”
ಉಡುಪಿ ನಗರದಲ್ಲಿ ಸ್ವಂತ ಮನೆ ಮಾಡಬೇಕು ಎಂಬುದು ಹಲವಾರು ಜನರ ಕನಸು. ಇದಕ್ಕಾಗಿ ಸಾಯಿ ಪಂಚಮಿ ಡೆವೆಲಪರ್ ಜನರಿಗೆ ಅನುಕೂಲವಾಗುವ ರೀತಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಬಜೆಟ್ ಫ್ರೆಂಡ್ಲಿ ಫ್ಲ್ಯಾಟ್ಗಳು ನಿರ್ಮಿಸಲ್ಪಟ್ಟಿದೆ. ಆಧುನಿಕ 12 ಫ್ಲಾಟ್ ಅಪಾರ್ಟ್‌ಮೆಂಟ್ ಬಿಲ್ಡಿಂಗ್‌ನಲ್ಲಿ ಸುಖಮಯ ಜೀವನವನ್ನು ಕಂಡುಕೊಳ್ಳಿ! ವೈಶಿಷ್ಟತೆಗಳು https://www.instagram.com/saipanchamidevelopers?igsh=MXU0MzdqcWlqZ2xlNg==
ಜ್ಞಾನಸುಧಾ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ, ಪ್ರತಿಭಾ ಪುರಸ್ಕಾರ 68.79ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ.
ಕಾರ್ಕಳ: ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು. ಡಾ.ಸುಧಾಕರ್ ಶೆಟ್ಟಿಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ನುಡಿದರು. ಅವರು ಗಣಿತನಗರದ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಹಾಗೂ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು […]
ಶ್ರೀ ರಾಮಾಂಜನೇಯ ದೇವಸ್ಥಾನ ಕಲ್ಯಾಣಪುರ: ವಸಂತಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ಶತಕಲಶಾಭಿಷೇಕ.
ಉಡುಪಿ: ಶ್ರೀ ರಾಮಾಂಜನೇಯ ದೇವಸ್ಥಾನ ಕಲ್ಯಾಣಪುರ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಮೇ 27, 28 ಎರಡು ದಿನಗಳ ಕಾಲ ಜರಗಿತು. ಶ್ರೀ ದೇವರ ಸನ್ನಿಧಿಯಲ್ಲಿ ಸೋಮವಾರ ಸಂಜೆ ವಸಂತಪೂಜೆ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ ಸೇವೆ, ಭಾಜನಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಿತು. ಪ್ರತಿಷ್ಠಾ ವರ್ಧಂತಿ ಅಂಗವಾಗಿ ಮಂಗಳವಾರ ಶ್ರೀ ದೇವರಿಗೆ ಪಂಚಾಮೃತಾ ಅಭಿಷೇಕ, ಶತ ಕಲಶಾಭಿಷೇಕ, ಸಾನಿಧ್ಯ ಹವನ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾ ಪೂಜೆಯ ಬಳಿಕ ಸಮಾರಾಧನೆ, ಪ್ರಸಾದ ವಿತರಣೆ ನಡೆಯಿತು. ವೇದಮೂರ್ತಿ ಕಾಶೀನಾಥ್ ಭಟ್ […]
ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ವಿಶ್ವಾಸ.
ಶಿಕಾರಿಪುರ: ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದರು. ಇಲ್ಲಿನ ತಾಲ್ಲೂಕು ಬಿಜೆಪಿ ಕಛೇರಿಯಲ್ಲಿ ಬುಧವಾರ ಬೆಳಗ್ಗೆ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಮೈತ್ರಿಯೊಂದಿಗೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಇನ್ನೆರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆಯಂತೆ ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ […]