ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಓರಿಯಂಟೇಶನ್ ಕಾರ್ಯಕ್ರಮ.

ಕುಂದಾಪುರ: ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಜೂನ್ 01 ರಂದು ಸಿಎ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು. ಸಿಎ ಗೋಪಾಲ ಕೃಷ್ಣ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್ ಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಕೌಶಲ್ಯ ಮುಖ್ಯ, ವಿದ್ಯಾರ್ಥಿಗಳು ಮನಸ್ಸಿನಲ್ಲಿ ಕೀಳರಿಮೆ ಬೆಳಸಿ ಕೊಳ್ಳದೆ ಸಾಧನೆಯ ಜೀವನ ನಿಮ್ಮದಾಗಬೇಕು ಎನ್ನುವ […]

ಮಂಗಳೂರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು: ಪ್ರಥಮ ಪಿ.ಯು.ಸಿ. ಹಾಸ್ಟೆಲ್ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮ.

ಮಂಗಳೂರು: ವಿದ್ಯಾರ್ಥಿಗಳು ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ತಲುಪಲು ಸಾಧ್ಯ. ಜೀವನದಲ್ಲಿ ಯಶಸ್ವಿಯಾಗಲು ಸಕಾರಾತ್ಮಕ ಮನೋಭಾವವನ್ನು ಹೊಂದಿರಬೇಕು ಎಂದು ಎಕ್ಸ್ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಪ್ರೊ.ನರೇಂದ್ರ ಎಲ್. ನಾಯಕ್‍ ರವರು ತಿಳಿಸಿದರು. ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2024 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನರಿತು ಸಮಯವ್ಯರ್ಥ ಮಾಡದೇ […]

ಕಾಪು: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ

ಉಡುಪಿ: ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂಧಿಸಿದ್ದಾರೆ.ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸಿಐ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ […]

ಕೋಟ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ನಡೆದಿದೆ. ಮೃತ ಬೈಕ್‌ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಅವರು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ ಹೋಗುವ ಕೆಎಸ್‌ಆರ್ […]

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ಪಾಸ್ ವಿತರಣೆ.

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಉಚಿತವಾಗಿ ಹಾಗೂ ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ರೂ. 30/- ಸೇವಾ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಬಸ್ಸು ಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾ೦ಶದಲ್ಲಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ https://ksrtc.karnataka.gov.in/student ನ್ನು ಡೌನ್‌ಲೋಡ್ ಮಾಡಿಕೊಂಡು, ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿಮಾಡಿ ಶಾಲಾ/ಕಾಲೇಜು ಮುಖೋಪಾಧ್ಯಾಯರ/ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ […]