ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಉಡುಪಿ, ಜೂನ್ 01: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ 10000 ರೂ. ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಕ್ರೀಡಾಪಟುಗಳಿಂದ ಇಲಾಖಾ ವೆಬ್‌ಸೈಟ್ http://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ […]
ಉಡುಪಿ ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಟೆನ್ನಿಸ್ ಪಂದ್ಯಾವಳಿ
ಉಡುಪಿ:ಕೇವಲ ಶ್ರೀಮಂತರ ಆಟ ಎಂದೇ ಕರೆಯಲ್ಪಡುವ ಟೆನ್ನಿಸ್ ಇಂದು ಶ್ರೀಸಾಮಾನ್ಯರು ಆಡುವ ಕ್ರೀಡೆಯಾಗಿ ಬದಲಾಗಿದೆ. ಯಾಕೆಂದರೆ, ಸಮಾಜ ಇಂದು ಕ್ರೀಡೆಯನ್ನು ನೋಡುತ್ತಿರುವ ದೃಷ್ಟಿಕೋನ ಬದಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಹೇಳಿದರು. ಇವರು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ದೈಹಿಕ ಶಿಕ್ಷಣ ವಿಭಾಗ, ಮತ್ತು ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಸಂಘ […]
ಬೆಳ್ತಂಗಡಿ: ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಸುನಿಲ್ ಅವರು ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದು, ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಉಡುಪಿ: ಪ್ರಸಿದ್ಧ ಪಾಕ ತಜ್ಞ ಅಚ್ಯುತ ಭಟ್ ಬನ್ನಂಜೆ ನಿಧನ.
ಉಡುಪಿ: ಪ್ರಸಿದ್ಧ ಪಾಕ ತಜ್ಞ ಅಚ್ಯುತ ಭಟ್ ಬನ್ನಂಜೆ (59) ಜೂನ್ 02 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ , ಮಗ ಮತ್ತು ಅಪಾರ ಬಂದು ಬಳಗ, ಶಿಷ್ಯ ರನ್ನು ಹೊಂದಿದ್ದಾರೆ.