ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತವಾಗಿದ್ದ ಚಾಲಕ ಮೃತ್ಯು

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರನ್ನು ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿತ್ತು.
ನೀಟ್ 2024 ರ ಫಲಿತಾಂಶ: ಜ್ಙಾನಸುಧಾದ ಕ್ರಿಷ್ ಕಡಲ್ಗಿಕರ್ ಗೆ 700 ಅಂಕ.

ಕಾರ್ಕಳ: NTA ನಡೆಸಿದ ರಾಷ್ಟ್ರಮಟ್ಟದ ನೀಟ್ 2024 ರ ಪರೀಕ್ಷಾ ಫಲಿತಾಂಶದಲ್ಲಿ ಜ್ಙಾನಸುಧಾದ ಕ್ರಿಷ್ ಕಡಲ್ಗಿಕರ್ 720 ರಲ್ಲಿ 700 ಅಂಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ 1880 ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿರುತ್ತಾರೆ. ಅಲ್ಲದೆ ಇದೇ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಶೆಟ್ಟಿ 690 ಅಂಕ, ಆರ್ಯ ಎಮ್ ಹಾಗೂ ಗಜೇಂದ್ರ ಅವರು 680 ಅಂಕ, ರೋಶ್ನಿ 677 ಸ್ವಸ್ತಿಕ್ 675, ಕ್ಷೀರಜ್ ಎಸ್ ಆಚಾರ್ಯ 675 ಅಂಕ ಗಳಿಸಿರುತ್ತಾರೆ. ಒಟ್ಟು 94 ವಿದ್ಯಾರ್ಥಿಗಳು 600 ಕ್ಕಿಂತ […]
ನೀಟ್ 2024: ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಅರ್ಜುನ್’ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್.

ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಮೊದಲ ಬಾರಿಗೆ ರಾಜ್ಯಕ್ಕೆ ಮೊದಲ ಬಾರಿಗೆ […]
ಜೂ.11 ರಂದು MSDC ಓರನ್ ಇಂಟರ್ನ್ಯಾಷನಲ್’ನಲ್ಲಿ “ಈದ್ ಸ್ಪೆಷಲ್ ಲುಕ್” ಉಚಿತ ಕಾರ್ಯಗಾರ.

ಮಣಿಪಾಲ: (MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೆನ್ ಇಂಟರ್ನ್ಯಾಷನಲ್ ನಲ್ಲಿ ಜೂ.11(ಮಂಗಳವಾರ) ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 01:00 ರವರೆಗೆ “ಈದ್ ಸ್ಪೆಷಲ್ ಲುಕ್” ಬಗ್ಗೆ ಉಚಿತ ಕಾರ್ಯಗಾರ ನಡೆಯಲಿದ್ದು, ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸ್ಥಳ: 3 ನೇ ಮಹಡಿ, MSDC, ಓರೇನ್ ಇಂಟರ್ನ್ಯಾಷನಲ್, ಡಾ ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, […]
ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ.

ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಉಡುಪಿವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಗ್ನಿಶಾಮಕ ದಳ ಕಿನ್ನಿಮೂಲ್ಕಿ ಉಡುಪಿ ಇದರ ಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪ ಸಸ್ಯಗಳನ್ನು ನೆಡಲಾಯಿತು. ಮುಖ್ಯ ಅತಿಥಿಯಾಗಿ ಶೂನ್ಯ (ಯೋಗ) ಮಾಸ್ಟರ್ ಧರ್ಮದತ್ತ ದಯಾನಂದ ಕೆ.ಶೆಟ್ಟಿ ಮಾತನಾಡುತ್ತ ಈಗ ನಾವು ಪರಿಸರವನ್ನು ರಕ್ಷಿಸುವ ಜವಬ್ದಾರಿಯನ್ನು ಹೊರಬೇಕಾಗಿದೆ. ಇಲ್ಲವಾದಲ್ಲಿ ನಮ್ಮ ಮುಂದಿನ ಜನಾಂಗ ನಮ್ಮನ್ನು ಕ್ಷಮಿಸಲಾರದು. ಪ್ರಪಂಚವನ್ನು ಬದಲಾಯಿಸುವ ಮೊದಲು ನಾನು ಬದಲಾವಣೆಗೆ ನಾಂದಿಯಾಗಬೇಕು. ಒಂದು ನಾನು ಸಾಧ್ಯವಾದಷ್ಟು ಪರಿಸರಕ್ಕೆ ಹಾನಿಯಾಗುವ ಕೆಲಸವನ್ನು ಮಾಡುವುದಿಲ್ಲ. […]