ಇಂದು ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ರಾಜ್ಯದ ಮಲೆನಾಡು, ಕರಾವಳಿ ಸೇರಿ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇಂದು ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ – ದೂರು ದಾಖಲು.

ಮಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ಮಂಗಳೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್‌ ಎಂಬಾತನ ಸ್ನೇಹವಾಗಿತ್ತು. ಮಾ. 23ರಂದು ಯುವತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದಾಗ ಅಲ್ಲಿಗೆ ಬಂದ ಆರೋಪಿ ವಿನೋದ್‌ರಾಜ್‌ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಅನಂತರವು ಯುವತಿಗೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ […]

ಮಂಗಳೂರು: ಸ್ಕೂಟರ್‌ ಸವಾರ ಮೃತ್ಯು.

ಮಂಗಳೂರು: ನಗರದ ಕೊಟ್ಟಾರಚೌಕಿ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್‌ ರಸ್ತೆಗೆ ಬಿದ್ದು ಸವಾರ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಮೃತಪಟ್ಟವರು ಪಿ. ಗಣೇಶ ಪೈ (67). ಅವರು ಜೂ. 4ರಂದು ಮಧ್ಯಾಹ್ನ ಸ್ಕೂಟರ್‌ನಲ್ಲಿ ಕೋಡಿಕಲ್‌ ಕಡೆಯಿಂದ ಕೊಟ್ಟಾರಚೌಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬರುತ್ತಿದ್ದಾಗ ಕೊಟ್ಟಾರ ಚೌಕಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 11 ರಂದು ‘ಮಿನಿ ಉದ್ಯೋಗ ಮೇಳ’

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, […]

ಉಡುಪಿ: ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೆ ಹೆಸರುವಾಸಿಯಾದ ಬನ್ನಂಜೆಯ “ಉಡುಪಿ ಸ್ಟೋರ್ಸ್”

ಉಡುಪಿ: ಉಡುಪಿ ವಿ21 ಗ್ರೂಪ್ ನವರಿಂದ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳಿಗೆ ಹೆಸರುವಾಸಿಯಾದ ನೂತನ ಮಳಿಗೆ “ಉಡುಪಿ ಸ್ಟೋರ್ಸ್” ನ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ಆರಂಭಗೊಂಡಿದ್ದು, ಈ ಮಳಿಗೆಯು ದಿನದ 24 ಗಂಟೆಯೂ ತೆರೆದಿರುತ್ತದೆ. ವಿಶೇಷ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಮಳಿಗೆ:ವಿ21 ಗ್ರೂಪ್ನ ಉಡುಪಿಯ ಮೊದಲ ಮಳಿಗೆಯಲ್ಲಿ ಉಡುಪಿಯ ಸಾಂಪ್ರದಾಯಿಕ ವಿಶೇಷ ತಿಂಡಿ ತಿನಿಸುಗಳು, ಹಲವು ಬಗೆಯ ಉಪ್ಪಿನಕಾಯಿ, ಚಟ್ನಿ ಪುಡಿ, ಹಪ್ಪಳಗಳು, ಸ್ಕ್ವಾಷ್ ಮತ್ತು ಸಿರಪ್ಗಳು, ಎಲ್ಲ ತರಹದ ಬೇಕರಿ […]