ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆಗೆ ನಟ ದರ್ಶನ್ ಸೂಚನೆ ನೀಡಿದ್ದರು ಎನ್ನಲಾಗಿದೆ. ದರ್ಶನ್ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಏನಿದು ಪ್ರಕರಣ?: ನಟ ದರ್ಶನ್ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ […]
ಬೈಂದೂರು: ವ್ಯಕ್ತಿ ನಾಪತ್ತೆ.
ಬೈಂದೂರು: ಗೋಳಿಹೊಳೆ ಗ್ರಾಮದ ರಬ್ಬರ್ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೇರಳ ಪಾಲಕಾಡ್ ಜಿಲ್ಲೆಯ ಉನ್ನಿ ಕುಟ್ಟನ್(21) ಎಂಬವರು ಜೂ.೮ರಂದು ಕೇರಳಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ: ಆರೋಪಿಗೆ ನ್ಯಾಯಾಂಗ ಬಂಧನ.
ಕಾಪು: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿ ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್ ಯಾನೆ ತಿಪ್ಪೇಶ್. ಈತ ಕಳೆದ ವರ್ಷ ಅ.15ರಿಂದ 25ರ ನಡುವಿನ ಅವಧಿಯಲ್ಲಿ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು, ದೈಹಿಕ ಸಂಪರ್ಕ ನಡೆಸಿ ಗರ್ಭಿಣಿಯನ್ನಾಗಿಸಿದ್ದು, ಎರಡು ತಿಂಗಳ ನಂತರ ಮನೆಯವರಿಗೆ ವಿಚಾರ ತಿಳಿದು […]