ಅಮಾಸೆಬೈಲು: ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ.
ಅಮಾಸೆಬೈಲು: ಹೊಸಂಗಡಿ ಕೆಪಿಸಿ ಶಾಲೆಯ ಗೌರವ ಶಿಕ್ಷಕಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.10ರಂದು ರಾತ್ರಿ ವೇಳೆ ಕೆಪಿಸಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಕೆಪಿಸಿ ಕಾಲೋನಿಯ ನಿವಾಸಿ ರಂಗಸ್ವಾಮಿ ಎಂಬವರ ಪತ್ನಿ ಸವಿತಾ(40) ಎಂದು ಗುರುತಿಸಲಾಗಿದೆ. ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಕೆಪಿಸಿ ವಸತಿ ಗೃಹದ ಹಾಲ್ ನಲ್ಲಿರುವ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಟರಿ ಕ್ಲಬ್ ಮಣಿಪಾಲ: ಸರಕಾರಿ ಮಹಿಳಾ ಹೈಸ್ಕೂಲ್ ಗೆ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಶೌಚಾಲಯ ಉದ್ಘಾಟನೆ.
ಉಡುಪಿ: ರೋಟರಿ ಕ್ಲಬ್ ಮಣಿಪಾಲ, ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರಕಾರಿ ಮಹಿಳಾ ಹೈಸ್ಕೂಲ್ ಗೆ 5 ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯದ ಉದ್ಘಾಟನೆಯನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ ಸಿ ಗೀತಾ ರವರು ರಿಬ್ಬನ್ ಕಟ್ ಮಾಡಿ ಉದ್ಘಾಟಿಸಿದರು.ಸಮಾಜಸೇವೆಯ ಮೂಲ ಉದ್ದೇಶದಿಂದ ರೋಟರಿ ಸಂಸ್ಥೆ ಮಹಿಳಾ ಶಿಕ್ಷಣಕ್ಕೆ ಪ್ರೋತ್ಸಾಹ ರೂಪದಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಿಸಿಕೊಟ್ಟಿದೆ. ಅದನ್ನು ಸೂಕ್ತರೀತಿಯಲ್ಲಿ ಬಳಸಿ ಅದರ ಸ್ವಚ್ಛತೆ ಕಾಪಾಡಿ ಮುಂದಿನ ವಿದ್ಯಾರ್ಥಿಗಳಿಗೆ ದಾರಿದೀಪಗಳಾಗಿ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು: “ಟೆಕ್ನಿಕಲ್ ಪ್ರಾಜೆಕ್ಟ್ ಐಡಿಯೇಶನ್” ಮಿನಿ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ.
ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಸಹ ಪಠ್ಯೇತರ ಕೋಶ, ಹವ್ಯಾಸಿ ಪ್ರಾಜೆಕ್ಟ್ ಕ್ಲಬ್, ಐ ಎಸ್ ಟಿ ಇ ವಿದ್ಯಾರ್ಥಿ ಘಟಕ ಮತ್ತು ಇನ್ಸ್ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್ಸಹಯೋಗದೊಂದಿಗೆ ಜೂನ್ 8 ರಂದು “ಟೆಕ್ನಿಕಲ್ ಪ್ರಾಜೆಕ್ಟ್ ಐಡಿಯೇಶನ್” ಎಂಬ ವಿಷಯದಡಿ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಮಿನಿ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಹಳೆ ವಿದ್ಯಾರ್ಥಿಯಾದ ಭಾರ್ಗವ ರಾಮ್ ಉಡುಪ, ಸಾಫ್ಟ್ ವೇರ್ ಇಂಜಿನಿಯರ್ ಬೆಂಗಳೂರು […]
ಜೆಇಇ ಅಡ್ವಾನ್ಸ್ಡ್: ನಿಟ್ಟೆಯ ನಮನ್ ಗೆ ರಾಷ್ಟ್ರಮಟ್ಟದ ರ‍್ಯಾಂಕ್
ನಿಟ್ಟೆ: ಭಾರತದ ಕಠಿಣ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ಡ್ – ೨೦೨೪ ಫಲಿತಾಂಶವನ್ನು ಐಐಟಿ ಮದ್ರಾಸ್ ಭಾನುವಾರ ಪ್ರಕಟಗೊಳಿಸಿದ್ದು, ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ನಮನ್ ವಿ ಶೆಟ್ಟಿ ರಾಷ್ಟ್ರಮಟ್ಟದಲ್ಲಿ ೨೭೫೩ ನೇ ರ‍್ಯಾಂಕ್ ಗಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿ.ಇ.ಟಿ ಪರೀಕ್ಷೆಯಲ್ಲಿ ೯೫ನೇ ರ‍್ಯಾಂಕ್ ಪಡೆದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಸಾಧನೆಯನ್ನೂ ಈ ವಿದ್ಯಾರ್ಥಿ ಮಾಡಿರುವರು. ಇವರ ಈ ಎರಡೂ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುವರು.
ಬೈಂದೂರು: ಮಹಿಳೆ ಮೃತ್ಯು.
ಬೈಂದೂರು, ಜೂ.11: ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬೈಂದೂರು ಯೋಜನಾ ನಗರದಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ಮಟಪಾಡಿಯ ನಾಗರತ್ನ(42) ಎಂದು ಗುರುತಿಸಲಾಗಿದೆ. ಇವರು ತನ್ನ ಮಕ್ಕಳು ಹಾಗೂ ನವೀನ್ ಎಂಬವರೊಂದಿಗೆ ವಾಸ ಮಾಡಿಕೊಂಡಿದ್ದು, ಜೂ.10ರಂದು ಮನೆಯಲ್ಲಿ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥ ಗೊಂಡ ಇವರು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟರೆಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇವರ ಮರಣದಲ್ಲಿ ಅನುಮಾನ […]