ಮಣಿಪಾಲ: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ – ಯುವಕ ಮೃತ್ಯು.
ಮಣಿಪಾಲ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಕೇಶವ (18). ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಅವರು ಮಣಿಪಾಲದ ಶಾಂತಿ ಖಾತ್ರಿ ಅವರ ಸ್ಕೂಟರ್ ಅನ್ನು ಅವರಿಗೆ ಹೇಳದೆ ಸವಾರಿ ಮಾಡಿಕೊಂಡು ಹೋಗಿದ್ದು ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು. ಮಣಿಪಾಲ ಠಾಣೆಯಲ್ಲಿ […]
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು.
ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ ವಿದ್ಯುತ್ ತಂತಿ ತುಳಿದು ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಆ ಬೆನ್ನಲ್ಲೇ ಇನೊಂದು ಘಟನೆ ನಡೆದಿದೆ. ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು- ಪಿರಿಯಾಪಟ್ಟಣ […]