ಉಡುಪಿ: ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ.

ಉಡುಪಿ: ಉಡುಪಿ ನಗರದ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುವ ಸಾಧ್ಯತೆ […]

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ.

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೆಲಸ ಕಾರ್ಯಗಳನ್ನು ಅರಸಿ ಜನ ಸಾಮಾನ್ಯರು ಕಚೇರಿಗಳಿಗೆ ಭೇಟಿ ನೀಡಿದಾಗ ಸ್ಪಂದಿಸಿ, ನಿಯಮಾನುಸಾರ ಕೆಲಸಗಳನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಅವರು ಜೂ.೧೨ ರಂದು ನಗರದ ಮಣಿಪಾಲ […]

ಉಡುಪಿ: ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಆದ್ಯತೆಯ ಮೇಲೆ ಪೂರ್ಣಗೊಳಿಸಲು ಮುಂದಾಗಿ – ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ.

ಉಡುಪಿ: ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ ಯಂತ್ರಗಳ ಬಳಕೆ ಹಾಗೂ ಹೆಚ್ಚು ಕಾರ್ಮಿಕರುಗಳನ್ನು ನಿಯೋಜಿಸುವುದರೊಂದಿಗೆ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೆರೆಗೆ ಪೂರ್ಣಗೊಳಿಸಲು ಮುಂದಾಗಬೇಕೆಂದು ಅಭಿಯಂತರುಗಳಿಗೆ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಜೂ.೧೨ ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಲ್ಸಂಕ ಅಂಡರ್‌ಪಾಸ್, ಇಂದ್ರಾಳಿ ಸೇತುವೆ, ಕರಾವಳಿ […]

ಹೆಬ್ರಿಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ.

ಹೆಬ್ರಿ: ಬೇರೆ ಬೇರೆ ಪ್ರದೇಶಗಳಲ್ಲಿ ಸುಮಾರು 150ಕ್ಕೂ ಮಿಕ್ಕಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ತೆರೆಯಲಾಗಿದ್ದು, ಇದೀಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆಯಲ್ಲಿ ಮಣಿಪಾಲ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅಧಿಕಾರಿ ಮೋಹನ್ ಶೆಟ್ಟಿ ಹೇಳಿದರು. ಅವರು ಜೂ.12 ರಂದು ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಆರಂಭಗೊಂಡ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಇದರ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ […]

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಯನ್ನು […]