ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ: ನಾಳೆ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ.

ಕುಂದಾಪುರ: ಮರವಂತೆ- ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ, ನಾವುಂದದ ನವೀಕೃತ ಪ್ರಧಾನ ಕಚೇರಿ ಹಾಗೂ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ಜೂ. 15 ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ರಾಜ್ಯ ಸಹಕಾರಿ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ […]

ಉಡುಪಿ: ವ್ಯಕ್ತಿ ನಾಪತ್ತೆ.

ಉಡುಪಿ, ಜೂನ್ 14: ನಗರದ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂಬ ವ್ಯಕ್ತಿಯು ಜೂನ್ 11 ರಂದು ಬೆಳಗಾವಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಟಕಣೆ ತಿಳಿಸಿದೆ.

ಕೂಡಲೆ ಬೇಕಾಗಿದ್ದಾರೆ.

ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ.

ಕಾಪು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ.

ಕಾಪು: ವಿವಾಹಿತ ಮಹಿಳೆಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಇವರಿಗೆ 7 ವರ್ಷ ಹಾಗೂ 1 ವರ್ಷ 9 ತಿಂಗಳ ಮಗುವಿದೆ. ಪತಿಯ ಮನೆಯಲ್ಲಿದ್ದ ಇವರು, ಇಂದು ಮುಂಜಾನೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. […]

ಕುಂದಾಪುರ: ಮೂಡ್ಲುಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ.

ಕುಂದಾಪುರ: ಮೂಡ್ಲುಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಜೂ.13ರಂದು ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ ಜರಗಿತು. ಮುಖ್ಯ ಅತಿಥಿಯವರಾದ ಶ್ರೀಯುತ ವೈ .ಸೀತಾರಾಮ್ ಶೆಟ್ಟಿ (ಕಾರ್ಯದರ್ಶಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ) ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ತಿಳಿಸುತ್ತಾ ರಕ್ತ ಸಂಗ್ರಹಣೆ, ಪರಿಷ್ಕರಣೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಶ್ರೀಯುತ ಶಿವರಾಮ ಶೆಟ್ಟಿ (ಕೋಶಾಧಿಕಾರಿ […]