‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯ ಅವಲೋಕನ ಕಾರ್ಯಕ್ರಮ.

ವಿದ್ಯಾಗಿರಿ: ಇಡೀ ಜಗತ್ತು ಮುಂದುವರಿಯುವುದು ದೊಡ್ಡ ಮಾತುಗಳಿಂದ ಹಾಗೂ ದೊಡ್ಡ ದೊಡ್ಡ ಕಟ್ಟಡಗಳಿಂದ ಅಲ್ಲ. ಮನುಷ್ಯನ ಮನಸ್ಸಿನಲ್ಲಿರುವ ಸಣ್ಣ ಸಣ್ಣ ಆಸೆಗಳು ಹಾಗೂ ಆಸೆಗಳನ್ನು ಈಡೇರಿಸುವುದಕ್ಕೆ ಆ ಸಮುದಾಯ ಹಾಗೂ ಲಕ್ಷಾಂತರ ಜನ ಮಾಡುವ ಸಣ್ಣ ಸಣ್ಣ ಚಟುವಟಿಕೆಗಳಿಂದ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು. ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಮತ್ತು ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ವತಿಯಿಂದ ನಡೆದ ಪ್ರಥಮ ಪಣಿಯಾಡಿ ಪ್ರಶಸ್ತಿ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ […]

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್.

ಕುಂದಾಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ಜೂ.8ರಂದು ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ […]

ಉಡುಪಿ: ಗೋರ್‌ಮಾಟಿ ನಾಟಕ ಪ್ರದರ್ಶನ.

ಉಡುಪಿ: ಯಕ್ಷ ರಂಗಾಯಣ ಕಾರ್ಕಳ ಇವರ ವತಿಯಿಂದ ಜೂನ್ 14 ರಂದು ಸಂಜೆ 6 ಗಂಟೆಗೆ ನಗರದ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಇಲ್ಲಿ ರಂಗಾಯಣ ಮೈಸೂರು ರೆಪರ್ಟರಿ ಪ್ರಯೋಗಿಸುವ “ಗೋರ್ ಮಾಟಿ” ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.