ಮೂಡುಬಿದಿರೆ: ಆಳ್ವಾಸ್‍ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಮಹಾಮೇಳ.
ವಿದ್ಯಾಗಿರಿ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ’ – ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. […]
ಕಾಪು: ರೈಲಿನಿಂದ ಬಿದ್ದು ಮಹಿಳೆ ಮೃತ್ಯು
ಕಾಪು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಪಾಪಾನಾಶಿನಿ ಹೊಳೆಯ ರೈಲ್ವೆ ಸೇತುವೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉತ್ತರ ಭಾರತ ಮೂಲದ ಕಾರ್ಮಿಕ ಮಹಿಳೆ ಆಗಿರಬೇಕೆಂದು ಶಂಕಿಸಲಾಗಿದೆ. ಮೃತದೇಹ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಢಿಕ್ಕಿಯ ರಭಸಕ್ಕೆ ರೈಲ್ವೆ ಹಳಿ ಮತ್ತು ಹೊಳೆಗೆ ಹಾಕಿರುವ ಕಂಬದ ಬೀಮ್ ಒಳಗೆ ಹೋಗಿ ಬಿದ್ದಿದೆ ಎನ್ನಲಾಗಿದೆ. ಕುತ್ತಿಗೆಯಲ್ಲಿ ತಾಳಿ ಸರ ಹೊಂದಿದ್ದ ಮೃತ ಮಹಿಳೆ, ನೈಟಿ ಧರಿಸಿದ್ದಾರೆ. ವಾರೀಸುದಾರರು ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಪಿಎಂ ವಿಶ್ವಕರ್ಮ ಯೋಜನೆಯಡಿ ವೃತ್ತಿ ಕೌಶಲ್ಯ ವೃದ್ಧಿ ತರಬೇತಿಗೆ 13,485 ಅರ್ಜಿ ಸಲ್ಲಿಕೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ
ಉಡುಪಿ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ಚಟುವಟಿಕೆಗಳಲ್ಲಿ ವೃತ್ತಿ ಕೌಶಲ್ಯ ವೃದ್ಧಿ ತರಬೇತಿಗೆ 50,000 ಮಂದಿ ನೋಂದಣಿ ಗುರಿ ಹೊಂದಲಾಗಿದ್ದು, ಈ ಸಂಬಂಧ ಕೇವಲ 13,485 ಅರ್ಜಿ ಗಳು ಮಾತ್ರ ಸಲ್ಲಿಕೆಯಾಗಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಕರಾವಳಿ ಬೈಪಾಸ್ ಬಳಿಯಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ಸ್ ಆ್ಯಂಡ್ ಜ್ಯುವೆಲ್ಲರಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 30 ಮಂದಿಯ ಮೊದಲ ತಂಡಕ್ಕೆ ಚಿನ್ನ, ಬೆಳ್ಳಿ ಆಭರಣ ತಯಾರಿಕೆಯ ಕೌಶಲ್ಯ ವೃದ್ಧಿ ತರಬೇತಿಯನ್ನು ಶುಕ್ರವಾರ […]
ಎಕ್ಸ್ಪರ್ಟ್ ಎನ್‍ಎಲ್‍ಟಿಯ ಶೇ.98ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹ
ಮಂಗಳೂರು : ಮಂಗಳೂರಿನ ಎಕ್ಸ್ಪರ್ಟ್ ಕೋಚಿಂಗ್ ಕ್ಲಾಸಸ್‍ನಲ್ಲಿ ನೀಟ್ ದೀರ್ಘಾವಧಿ ಕೋಚಿಂಗ್ ಪಡೆದ ಶೇ.98.37ರಷ್ಟು ವಿದ್ಯಾರ್ಥಿಗಳುವೈದ್ಯಕೀಯ ಶಿಕ್ಷಣ ಪ್ರವೇಶ ಪಡೆಯಲು ಅರ್ಹತೆಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. 675ಕ್ಕಿಂತ ಅಧಿಕ ಅಂಕವನ್ನು 2 ವಿದ್ಯಾರ್ಥಿಗಳು, 650ಕ್ಕಿಂತ ಅಧಿಕ ಅಂಕವನ್ನು 8 ವಿದ್ಯಾರ್ಥಿಗಳು, 625ಕ್ಕಿಂತ ಅಧಿಕ ಅಂಕವನ್ನು 19 ವಿದ್ಯಾರ್ಥಿಗಳು, 600ಕ್ಕಿಂತ ಅಧಿಕ ಅಂಕವನ್ನು 36ವಿದ್ಯಾರ್ಥಿಗಳು, 575ಕ್ಕಿಂತ ಅಧಿಕ ಅಂಕವನ್ನು 56 ವಿದ್ಯಾರ್ಥಿಗಳು, 550ಕ್ಕಿಂತ ಅಧಿಕ ಅಂಕವನ್ನು 75 ವಿದ್ಯಾರ್ಥಿಗಳು, 525ಕ್ಕಿಂತ ಅಧಿಕ ಅಂಕವನ್ನು 89 ವಿದ್ಯಾರ್ಥಿಗಳು, 500ಕ್ಕಿಂತ […]
ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆ – ನಿಷೇಧಾಜ್ಞೆ ಜಾರಿ.
ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ದ್ವಿತೀಯ ದರ್ಜೆ ಸಹಾಯಕರು / ಕಿರಿಯ ಸಹಾಯಕರು ಮುಂತಾದ ಸಮನಾದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 22 ರಂದು ನಗರದ ಕುಂಜಿಬೆಟ್ಟುವಿನ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144(1) […]