ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜಾರಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದು ಕಂಡುಬoದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನಧಿಕೃತವಾಗಿ […]
ಉತ್ತಮ ಸೇವೆಗಾಗಿ ಅಗ್ನಿಶಾಮಕ ಚಾಲಕರಿಗೆ ಚಿನ್ನದ ಪದಕ

ಉಡುಪಿ: ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ವತಿಯಿಂದ ಉಡುಪಿಯ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ಅವರ ಅತ್ಯುತ್ತಮ ಮತ್ತು ಗಣನೀಯ ಸೇವೆಯನ್ನು ಪರಿಗಣಿಸಿ, ಇವರ ಉತ್ತಮ ಸೇವೆಗಾಗಿ ರಾಜ್ಯ ಸರಕಾರವು 2024 ನೇ ಸಾಲಿನ ಚಿನ್ನದ ಪದಕ ನೀಡಿ ಗೌರವಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಣಿಪಾಲ – ಮಂಗಳೂರಿನ ಪ್ರತಿಷ್ಠಿತ ಉತ್ಪಾದನಾ (Production) ಇಂಡಸ್ಟ್ರಿಗಳಲ್ಲಿ ವಿವಿಧ ಉದ್ಯೋಗವಕಾಶಗಳು.
