ಉಡುಪಿ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಗ್ರೀನ್ ಆಸ್ಪತ್ರೆ ಯೋಜನೆ ಉದ್ಘಾಟನೆ.
ಉಡುಪಿ: ಗಿಡ ಮರಗಳನ್ನು ಬೆಳೆಸಿ ಪರಿಸರ ಉಳಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ನಮಗೆ ಗಾಳಿ, ನೀರು, ಆಹಾರ, ಬೆಳಕು, ಆಮ್ಲಜನಕ ಇದು ಪರಿಸರದಲ್ಲಿ ಮಾತ್ರ ಸಿಗಲು ಸಾಧ್ಯ. ಆದುದರಿಂದ ಪ್ರತಿಯೊಂದು ಸಂಸ್ಥೆ ಮನೆಯ ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಸಿಎಸ್‌ಐ, ಕೆಎಸ್‌ಡಿ ಬಿಷಪ್ ಹೇಮಚಂದ್ರ ಕುಮಾರ್ ಹೇಳಿದರು. ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಗ್ರೀನ್ ಆಸ್ಪತ್ರೆ ಯೋಜನೆಯನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು. ಆಸ್ಪತ್ರೆಗಳಲ್ಲಿ ಉತ್ತಮ ಪರಿಸರವನ್ನು ರೋಗಿಗಳಿಗೆ ಕೊಟ್ಟಾಗ ಅವರು ಅತೀ ಶೀಘ್ರವಾಗಿ ರೋಗ […]
ಮೂಡುಬಿದಿರೆ: ‘ಜಗನ್ಮೋಹನ ಹಾಗೂ ಶೋಭಾಯಮಾನ’ ನೂತನ ಕಾಲೇಜು ಸಂಕೀರ್ಣ ಹಾಗೂ ವಸತಿ ನಿಲಯಗಳ ಲೋಕಾರ್ಪಣೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ ಶ್ರೀಪತಿ ಭಟ್ ನೆರವೇರಿಸಿದರು. ಡಾ ಎಂ ಮೋಹನ ಆಳ್ವರ ಧರ್ಮಪತ್ನಿ ದಿ.ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು,ಇದರ […]
ಉಡುಪಿ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿಯಾಗಿ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಭೋವಿ ಸಮುದಾಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿರುತ್ತಾರೆ. ಭೋವಿ ಮುಖಂಡರುಗಳಾದ ಆನಂದ್ ಸಾಯಿಬರಕಟ್ಟೆ, ಅಶೋಕ್ ಪರ್ಕಳ, ಜಗದೀಶ್ ಪರ್ಕಳ ಈಶ್ವರ್ ಸಾಲಿಗ್ರಾಮ, ರಾಜ ಕುಮಾರ್ ಪೆರ್ಣoಕಿಲ, ಅಣ್ಣಪ್ಪ ಯಡ್ತಡಿ. ಶರಣ್ ಬ್ರಹ್ಮಾವರ,ಮನೋಹರ್ ಸಾಯಿಬರಕಟ್ಟೆ, ಮಣಿಕಂಠ ಪರ್ಕಳ, ಸಂದೇಶ್ ಪೆರ್ಡೂರ್, ಚಾಮರಾಜ ಸಾಯಬರಕಟ್ಟೆ, ಚೇತನ್ ಪರ್ಕಳ, […]
ಸುಳ್ಯ: ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಮೃತ್ಯು.
ಸುಳ್ಯ: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಕಾಶ (29) ಮೃತ ದುರ್ದೈವಿ. ಕಡಬ ಮೂಲದ ಸಂಸ್ಥೆಯ ವತಿಯಿಂದ ಸುಳ್ಯ, ಮುರುಳ್ಯದ ಅಲೆಕ್ಕಾಡಿಯ ಪಾರ್ಲ ಎಂಬಲ್ಲಿ ಕಾರ್ಮಿಕರು ಮೆಸ್ಕಾಂ ಪಂಜ ಸೆಕ್ಷನ್ ವ್ಯಾಪ್ತಿಯ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಮಾಡುತ್ತಿದ್ದರು. ಈ ವೇಳೆ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ಕಿರುಚಿದ್ದಾನೆ. ಬಳಿಕ […]
ಉಡುಪಿ: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ನಿಧನ.
ಉಡುಪಿ: ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.