ಉಡುಪಿ: ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವ ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ 188 ಕೋಟಿ ರೂ.ಅನುದಾನ ಮಂಜೂರಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಬಂದರಿನ ಭೂಸ್ವಾಧೀನ ಪ್ರಕ್ರಿಯೆ ಕುರಿತ ಸಮಾಲೋಚನಾ ಸಭೆಗೆ ತಿಳಿಸಲಾಯಿತು.ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹೆಜಮಾಡಿ ಬಂದರು ಭೂಸ್ವಾಧೀನ ಪ್ರಕ್ರಿಯೆಗೆ ಇರುವ ಸಮಸ್ಯೆಗಳ ಕುರಿತು ಇಲಾಖಾಧಿಕಾರಿಗಳು ಸಂಸದರಿಗೆ ವಿವರಿಸಿದರು. ಬಂದರಿನ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳು ಆರ್ಥಿಕ ಇಲಾಖೆಯಲ್ಲಿ […]

ಕಾರ್ಕಳ: ಎರ್ಲಪಾಡಿ ಗ್ರಾಮದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ.

ಕಾರ್ಕಳ: ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ನಿವಾಸಿ ಜೆರೋಮ್ ಪಿಂಟೋ(70) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಜೂ.18ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ, ನಟ ದರ್ಶನ್ 30 ಲಕ್ಷ ರೂ. ನೀಡಿರುವುದಾಗಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ. ರೇಣುಕಾ ಸ್ವಾಮಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಭರಿಸಲು 30 ಲಕ್ಷ ರೂ. ಹಣ ನೀಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ದರ್ಶನ್ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ. ಪೊಲೀಸರು ಈ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ […]

ಕಲಾವಿದರಿಗೆ ಗುರುತಿನ ಚೀಟಿ: ಅರ್ಜಿ ಅಹ್ವಾನ.

ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಅರ್ಜಿಯಲ್ಲಿ ಸ್ವ-ವಿವರದ ಮಾಹಿತಿಯೊಂದಿಗೆ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠ ಸಂಘ ಸಂಸ್ಥೆಗಳಿಂದ […]

ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಅಹ್ವಾನ.

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, […]